ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Israel–Hamas war: ಯುದ್ಧದಿಂದ ಗಾಜಾದಲ್ಲಿ ಮೃತಪಟ್ಟವರ ಸಂಖ್ಯೆ 37,296

Published 15 ಜೂನ್ 2024, 11:15 IST
Last Updated 15 ಜೂನ್ 2024, 11:15 IST
ಅಕ್ಷರ ಗಾತ್ರ

ಗಾಜಾಪಟ್ಟಿ: ಪ್ಯಾಲೆಸ್ಟೀನ್‌ ಹಾಗೂ ಇಸ್ರೇಲ್‌ ನಡುವೆ ಎಂಟು ತಿಂಗಳಿನಿಂದ ನಡೆಯುತ್ತಿರುವ ಯುದ್ಧದಿಂದಾಗಿ 37,296 ಮಂದಿ ಮೃತಪಟ್ಟಿದ್ದಾರೆ ಎಂದು ಹಮಾಸ್‌ ಆಡಳಿತವಿರುವ ಗಾಜಾ ಆರೋಗ್ಯ ಇಲಾಖೆ ಶನಿವಾರ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ ಕನಿಷ್ಠ 30 ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಿಕೆ ಬಿಡುಗಡೆ ಮಾಡಿರುವ ಆರೋಗ್ಯ ಇಲಾಖೆ, ಒಟ್ಟು 85,197 ನಾಗರಿಕರು ಗಾಯಗೊಂಡಿದ್ದಾರೆ ಎಂದೂ ಹೇಳಿದೆ.

ಹಮಾಸ್ ಬಂಡುಕೋರರು ಇಸ್ರೇಲ್‌ ಮೇಲೆ ಕಳೆದ ವರ್ಷ ಅಕ್ಟೋಬರ್‌ 7ರಂದು ದಾಳಿ ನಡೆಸಿದ್ದರು. ಈ ವೇಳೆ ಸಾವಿರಾರು ಮಂದಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಇಸ್ರೇಲ್‌ ಪ್ರತಿದಾಳಿ ನಡೆಸುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT