ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರೆಜಿಲ್‌: ಭಾರಿ ಮಳೆ, ಪ್ರವಾಹ: 136 ಜನ ಸಾವು

Published 12 ಮೇ 2024, 6:00 IST
Last Updated 12 ಮೇ 2024, 6:00 IST
ಅಕ್ಷರ ಗಾತ್ರ

ರಿಯೊ ಡಿ ಜನೈರೊ: ಬ್ರೆಜಿಲ್‌ನ ರಿಯೊ ಗ್ರಾಂಡೆ ಡೊ ಸುಲ್ ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಈವರೆಗೆ 136 ಜನ ಮೃತಪಟ್ಟಿದ್ದು, 125 ಮಂದಿ ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಆಡಳಿತ ಹೇಳಿದೆ.

ಬಿರುಗಾಳಿ ಮತ್ತು ಪ್ರವಾಹದ ಪರಿಣಾಮ ಸುಮಾರು 446 ನಗರಗಳಿಗೆ ಹಾನಿಯಾಗಿದೆ. ರಾಜ್ಯದಲ್ಲಿ ಸುಮಾರು 1 ಕೋಟಿೂ ಹೆಚ್ಚು ಜನಸಂಖ್ಯೆಯಿದ್ದು, 20 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹದಿಂದ ತೊಂದರೆಗೀಡಾಗಿದ್ದಾರೆ. ಸದ್ಯ ಸುಮಾರು 5,37,000 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಸ್ಥಳೀಯ ನಾಗರಿಕ ರಕ್ಷಣಾ ಸಂಸ್ಥೆ ಹೇಳಿಕೆ ನೀಡಿರುವುದಾಗಿ ರಾಯಿಟರ್ಸ್‌ ವರದಿ ಮಾಡಿದೆ.

ಮಳೆಯಿಂದಾಗಿ ರಾಜ್ಯದ ನದಿಗಳು ಉಕ್ಕಿ ಹರಿಯುತ್ತಿದ್ದು, ಮಳೆ ಮುಂದುವರಿದರೆ ಅಪಾಯ ಸ್ಥಿತಿ ಎದುರಾಗಬಹುದು ಎಂದು ಅಲ್ಲಿಯ ಹವಾಮಾನ ಇಲಾಖೆ ಎಚ್ಚರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT