ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನದಲ್ಲಿ ಭಾರಿ ಮಳೆ: 37 ಸಾವು, ಭೂಕುಸಿತದಿಂದಾಗಿ ರಸ್ತೆಗಳಿಗೆ ಹಾನಿ

Published 3 ಮಾರ್ಚ್ 2024, 16:07 IST
Last Updated 3 ಮಾರ್ಚ್ 2024, 16:07 IST
ಅಕ್ಷರ ಗಾತ್ರ

ಪೇಶಾವರ: ಪಾಕಿಸ್ತಾನದಾದ್ಯಂತ ಭಾರಿ ವರ್ಷಧಾರೆ ಸುರಿದಿದ್ದು, ಕಳೆದ 48 ಗಂಟೆಗಳ ಅವಧಿಯಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ 37 ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಭಾರಿ ಮಳೆಯಿಂದ ಮನೆಗಳು ಕುಸಿದಿವೆ. ಭೂಕುಸಿತದಿಂದಾಗಿ ರಸ್ತೆಗಳಿಗೆ ಹಾನಿಯಾಗಿದ್ದು ಸಂಚಾರ ಸ್ಥಗಿತಗೊಂಡಿದೆ. ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ವಾಯವ್ಯ ಭಾಗದಲ್ಲಿ ಭಾರಿ ಹಾನಿಯಾಗಿದೆ ಎಂದು ಅವರು ಹೇಳಿದ್ದಾರೆ. 

ಅಫ್ಗಾನಿಸ್ತಾನದ ಗಡಿಗೆ ಹೊಂದಿಕೊಂಡಿರುವ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಗುರುವಾರ ರಾತ್ರಿಯಿಂದ ಮಳೆ ಸಂಬಂಧಿತ ಅವಘಡಗಳಲ್ಲಿ ಕನಿಷ್ಠ 27 ಜನರು ಮೃತಪಟ್ಟಿದ್ದು, ಇವರಲ್ಲಿ ಮಕ್ಕಳ ಸಂಖ್ಯೆಯೇ ಹೆಚ್ಚು ಎಂದು  ಪ್ರಾಂತೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ತಿಳಿಸಿದೆ.

ಬಲೂಚಿಸ್ತಾನದ ನೈರುತ್ಯ ಭಾಗದಲ್ಲಿ ಪ್ರವಾಹ ಉಂಟಾಗಿದೆ. ಕರಾವಳಿಯ ಗ್ವಾದಾರ್‌ ಪಟ್ಟಣದಲ್ಲಿ ಐವರು ಮೃತಪಟ್ಟಿದ್ದಾರೆ. ಜನಜೀವನ ಅಸ್ತವ್ಯಸ್ತವಾಗಿದ್ದು, ಮನೆಗಳಿಗೆ ನೀರು ನುಗ್ಗಿದೆ. ಅಪಾರ ಸಂಖ್ಯೆಯ ಜನರು ನಿರಾಶ್ರಿತರಾಗಿದ್ದಾರೆ. ಪಾಕ್‌ ಆಕ್ರಮಿತ ಕಾಶ್ಮೀರದಲ್ಲೂ ಐವರು ಮೃತಪಟ್ಟಿದ್ದಾರೆ ಎಂದು ಪ್ರಾಧಿಕಾರ ತಿಳಿಸಿದೆ.

ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಬಜೌರ್, ಸ್ವಾತ್, ಲೋವರ್ ದಿರ್, ಮಲಕಾಂಡ್, ಖೈಬರ್, ಪೆಶಾವರ, ಉತ್ತರ–ದಕ್ಷಿಣ ವಜಿರಿಸ್ತಾನ್ ಹಾಗೂ ಲಕ್ಕಿ ಮಾರ್ವಾಟ್‌ ಸೇರಿದಂತೆ 10 ಜಿಲ್ಲೆಗಳಲ್ಲಿ ಸುರಿದ ಧಾರಾಕಾರ ಮಳೆಗೆ 37 ಜನರು ಗಾಯಗೊಂಡಿದ್ದಾರೆ ಪ್ರಾಧಿಕಾರ ತಿಳಿಸಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT