ಹಾಂಗ್ಕಾಂಗ್: ಸರ್ಕಾರಿ ವಿರೋಧಿ ಪ್ರತಿಭಟನೆ ಶನಿವಾರವೂ ಮುಂದುವರಿದಿದ್ದು, ಇಲ್ಲಿನ ಪೊಲೀಸ್ ಮುಖ್ಯ ಕಚೇರಿಗೆ ಪ್ರತಿಭಟನಕಾರರು ಮುತ್ತಿಗೆ ಹಾಕಿದರು. ಇದು ಕಾನೂನು ಬಾಹಿರ ಹಾಗೂ ವಿಚಾರರಹಿತ ಎಂದುಶನಿವಾರ ಪೊಲೀಸರು ಹೇಳಿದ್ದಾರೆ.

ಪ್ರತಿಭಟನಕಾರರು ಪೊಲೀಸ್ ಕಚೇರಿಯ ಮೇಲೆ ಮೊಟ್ಟೆಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಿದರು.

ಹಾಂಗ್ಕಾಂಗ್ ಸಂಸತ್ತಿನ ಎದುರು ನಡೆದ ಬೃಹತ್ ಪ್ರತಿಭಟನೆ ವೇಳೆ ಪ್ರತಿಭಟನಕಾರರ ಮೇಲೆ ಪೊಲೀಸರು ಅಶ್ರುವಾಯು ಹಾಗೂ ರಬ್ಬರ್ ಗುಂಡುಗಳು ಹಾರಿಸಿದ್ದರು. ಈ ಕ್ರಮಕ್ಕೆ ಭಾರಿ ವಿರೋಧ ವ್ಯಕ್ತವಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.