ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚೀನಾದಲ್ಲಿ ಅಂತರರಾಷ್ಟ್ರೀಯ ಯೋಗ ದಿನ

Published 22 ಜೂನ್ 2024, 15:30 IST
Last Updated 22 ಜೂನ್ 2024, 15:30 IST
ಅಕ್ಷರ ಗಾತ್ರ

ಬೀಜಿಂಗ್ (ಪಿಟಿಐ): ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಚೀನಾದಾದ್ಯಂತ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಯೋಗಾಭ್ಯಾಸದ ವಿವಿಧ ಭಂಗಿಗಳನ್ನು ನೂರಾರು ಯೋಗ ಉತ್ಸಾಹಿಗಳು ಪ್ರದರ್ಶಿಸಿದರು.

ವಿವಿಧ ನಗರಗಳಲ್ಲಿ ಅಂತರರಾಷ್ಟ್ರೀಯ ಯೋಗ ದಿನದಂದು ನಡೆಯಲಿರುವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಅದರಲ್ಲೂ ಯುವ ಜನರ ಸಂಖ್ಯೆಯೇ ಹೆಚ್ಚಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಬೀಜಿಂಗ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಶನಿವಾರ ಆಯೋಜಿಸಿದ್ದ ಎರಡು ಗಂಟೆಗಳ ಕಾರ್ಯಕ್ರಮದಲ್ಲಿ, ಒಂದು ಸಾವಿರಕ್ಕೂ ಹೆಚ್ಚು ಯೋಗ ಉತ್ಸಾಹಿಗಳು ಭಾಗವಹಿಸಿದ್ದರು. ವಾರಾಂತ್ಯದ ರಜೆಗೆ ಹೊಂದಾಣಿಕೆಯಾಗುವಂತೆ ವಿಶ್ವಸಂಸ್ಥೆಯ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಒಂದು ದಿನದ ನಂತರ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಹಳೆ ರಾಯಭಾರ ಕಚೇರಿ ಆವರಣದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಚೀನಾದ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳು ಭಾಗಿಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT