ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುತ್ತೇನೆ: ಪುಟಿನ್‌

Published 8 ಡಿಸೆಂಬರ್ 2023, 15:39 IST
Last Updated 8 ಡಿಸೆಂಬರ್ 2023, 15:39 IST
ಅಕ್ಷರ ಗಾತ್ರ

ಮಾಸ್ಕೋ (ಎಎಫ್‌ಪಿ): ಮಾರ್ಚ್‌ನಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುವುದಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರು ಶುಕ್ರವಾರ ತಿಳಿಸಿದ್ದಾರೆ.

ಕ್ರೆಮ್ಲಿನ್‌ನಲ್ಲಿ ಯೋಧರಿಗೆ ಹಮ್ಮಿಕೊಂಡಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡ ಬಳಿಕ ಮಾತನಾಡಿದ ಅವರು, ‘ಇದು ನಿರ್ಧಾರವನ್ನು ತೆಗೆದುಕೊಳ್ಳಬೇಕಾದ ಸಮಯ. ಚುನಾವಣೆಯಲ್ಲಿ ಸ್ಪರ್ಧಿಸದೆ ಬೇರೆ ಮಾರ್ಗವಿಲ್ಲ’ ಎಂದು ಹೇಳಿದ್ದಾರೆ.

ಮಾರ್ಚ್‌ 17ರಂದು ಅಧ್ಯಕ್ಷೀಯ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ಪುಟಿನ್‌ ಅವರು ಐದನೇ ಅವಧಿ‌ಗೆ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದು, 2020ರ ಸಾಂವಿಧಾನಿಕ ತಿದ್ದುಪಡಿಯ ನಂತರ ಅವರಿಗೆ ಇನ್ನೂ ಎರಡು ಅವಧಿಗೆ ಆಯ್ಕೆಯಾಗಲು ಅವಕಾಶ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT