ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ–ಶ್ರೀಲಂಕಾ ರಕ್ಷಣಾ ಬಲವರ್ಧನೆಗೆ ಚರ್ಚೆ

Published 3 ಮೇ 2023, 13:58 IST
Last Updated 3 ಮೇ 2023, 13:58 IST
ಅಕ್ಷರ ಗಾತ್ರ

ಕೊಲಂಬೊ: ನೆರೆಯ ದ್ವೀಪ ರಾಷ್ಟ್ರ ಶ್ರೀಲಂಕಾಕ್ಕೆ ನಾಲ್ಕು ದಿನಗಳ ಪ್ರವಾಸ ಕೈಗೊಂಡಿರುವ ಭಾರತೀಯ ವಾಯುಪಡೆ ಮುಖ್ಯಸ್ಥ ಏರ್‌ಚೀಫ್‌ ಮಾರ್ಷಲ್‌ ವಿ.ಆರ್‌. ಚೌಧರಿ ಅವರು, ಬುಧವಾರ ಶ್ರೀಲಂಕಾ ಅಧ್ಯಕ್ಷ ರಾನಿಲ್‌ ವಿಕ್ರಮಸಿಂಘೆ ಮತ್ತು ಪ್ರಧಾನಿ ದಿನೇಶ್‌ ಗುಣವರ್ಧನೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಶ್ರೀಲಂಕಾದ ಏರ್‌ ಮಾರ್ಷಲ್‌ ಎಸ್.ಕೆ. ಪತಿರಾಣ ಅವರ ಆಹ್ವಾನದ ಮೇರೆಗೆ ಚೌಧರಿ ಈ ಪ್ರವಾಸ ಕೈಗೊಂಡಿದ್ದಾರೆ. ರಕ್ಷಣೆಗೆ ಸಂಬಂಧಿಸಿದ ದ್ವಿಪಕ್ಷೀಯ ಸಹಕಾರದ ಬಗ್ಗೆ ಅವರು ಚರ್ಚಿಸಿದರು. 

ಎರಡು ದೇಶಗಳ ನಡುವಣ ರಕ್ಷಣೆ ವಿಷಯಕ್ಕೆ ಸಂಬಂಧಿಸಿದಂತೆ ಪರಸ್ಪರ ಬದ್ಧತೆ ಕಾಯ್ದುಕೊಳ್ಳುವ ಬಗ್ಗೆ ಮಾತುಕತೆ ವೇಳೆ ಚರ್ಚಿಸಲಾಯಿತು. ಅಲ್ಲಿನ ಪ್ರತಿಷ್ಠಿತ ರಾಷ್ಟ್ರೀಯ ರಕ್ಷಣಾ ಕಾಲೇಜಿನಲ್ಲಿ ಚೌಧರಿ ಭಾಷಣ ಕೂಡ ಮಾಡಿದ್ದಾರೆ ಎಂದು ಭಾರತೀಯ ವಾಯುಪಡೆ ಟ್ವೀಟ್‌ ಮಾಡಿದೆ.

ರಕ್ಷಣಾ ಖಾತೆ ರಾಜ್ಯ ಸಚಿವ ಪ್ರೇಮಿತ ಭಂಡಾರ ತೆನ್ನಿಕೋನ್‌ ಹಾಗೂ ರಕ್ಷಣಾ ಸಲಹೆಗಾರ ಸಂಘಲ ರತ್ನಾಯಕ ಅವರನ್ನೂ ಚೌಧರಿ ಭೇಟಿ ಮಾಡಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT