ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕ ಚುನಾವಣೆ: ಉಭಯ ಅಭ್ಯರ್ಥಿಗಳಿಗೂ ದೇಣಿಗೆ ನೀಡುವುದಿಲ್ಲ– ಎಲಾನ್ ಮಸ್ಕ್

Published 7 ಮಾರ್ಚ್ 2024, 3:24 IST
Last Updated 7 ಮಾರ್ಚ್ 2024, 3:24 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷೀಯ ಚುನಾವಣೆ ಹಿನ್ನೆಲೆ ಉಭಯ ಪಕ್ಷದ ಅಭ್ಯರ್ಥಿಗಳಿಗೂ ಹಣ ದೇಣಿಗೆ ನೀಡುವ ಯೋಚನೆ ಹೊಂದಿಲ್ಲ ಎಂದು ಟೆಸ್ಲಾ ಸಿಇಓ ಎಲಾನ್ ಮಸ್ಕ್ ಸ್ಪಷ್ಟಪಡಿಸಿದ್ದಾರೆ.

ಫ್ಲೋರಿಡಾದಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾದ ಎರಡು ದಿನಗಳ ನಂತರ ಈ ಎಲಾನ್ ಮಸ್ಕ್‌ ಈ ಹೇಳಿಕೆ ನೀಡಿದ್ದಾರೆ.

‘ಸ್ಪಷ್ಟವಾಗಿ ಹೇಳಬೇಕೆಂದರೆ... ನಾನು ಯಾವ ಅಧ್ಯಕ್ಷೀಯ ಅಭ್ಯರ್ಥಿಗೂ ದೇಣಿಗೆ ನೀಡುತ್ತಿಲ್ಲ’ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಎಲಾನ್‌ ಮಸ್ಕ್‌ ಸೇರಿದಂತೆ ಬಿಲಿಯನೇರ್‌ಗಳು, ಉದ್ಯಮಿಗಳು, ರಿಪಬ್ಲಿಕನ್ ಪಕ್ಷಕ್ಕೆ ದೇಣಿಗೆ ನೀಡುವ ಕೆಲ ಶ್ರೀಮಂತ ವ್ಯಕ್ತಿಗಳು ಭಾನುವಾರ ಡೊನಾಲ್ಡ್ ಟ್ರಂಪ್ ಅವರನ್ನು ಫ್ಲೋರಿಡಾದ ಪಾಮ್ ಬೀಚ್‌ನಲ್ಲಿ ಭೇಟಿಯಾಗಿ, ಖಾಸಗಿ ವಿಷಯವನ್ನು ಚರ್ಚಿಸಿದ್ದಾರೆ ಎಂದು ನ್ಯೂಯಾರ್ಕ್‌ ಟೈಮ್ಸ್ ವರದಿ ಮಾಡಿತ್ತು. ಇದಾದ ಬಳಿಕ ಎಲಾನ್‌ ಮಸ್ಕ್‌ ಅಧ್ಯಕ್ಷೀಯ ಚುನಾವಣೆಯಲ್ಲಿ ಹೂಡಿಕೆ ಮಾಡುವ ಸಾಧ್ಯತೆಯಿದೆ ಎಂದು ಚರ್ಚೆಯಾಗಿತ್ತು.

ಎಲಾನ್‌ ಮಸ್ಕ್‌ ಅವರ ಪೋಸ್ಟ್‌ಗೆ ಉಭಯ ಪಕ್ಷಗಳಾದ ಡೆಮಾಕ್ರೆಟಿಕ್‌ ಮತ್ತು ರಿಪಬ್ಲಿಕನ್‌ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT