ಲಾಹೋರ್: ಪಂಜಾಬ್ ಮುಖ್ಯಮಂತ್ರಿ ಮರಿಯಂ ನವಾಜ್ ವಿರುದ್ಧ ಪ್ರಕರಣ ದಾಖಲಿಸುವಂತೆ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ದೂರು ನೀಡಿದ್ದಾರೆ.

‘ಮರಿಯಂ ಹಾಗೂ ಇತರ ಎಂಟು ಜೈಲು ಅಧಿಕಾರಿಗಳ ಸೂಚನೆಯಂತೆ ನನಗೆ ಜೈಲಿನಲ್ಲಿ ಮೂಲ ಸೌಲಭ್ಯಗಳನ್ನು ಒದಗಿಸುತ್ತಿಲ್ಲ’ ಎಂದು ಆರೋಪಿಸಿ ಖಾನ್ ಅವರು ರಾವಲ್ಪಿಂಡಿಯ ಪೊಲೀಸ್ ಮುಖ್ಯಸ್ಥರಿಗೆ ದೂರಿನ ಅರ್ಜಿ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಹಾಗೂ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸುವಂತೆಯೂ ದೂರಿನಲ್ಲಿ ಕೋರಿದ್ದಾರೆ.

ಮಾಜಿ ಪ್ರಧಾನಿಯು 2023ರ ಆಗಸ್ಟ್ನಿಂದಲೂ ಜೈಲಿನಲ್ಲಿದ್ದು, ಪ್ರಸ್ತುತ ರಾವಲ್ಪಿಂಡಿಯ ಅಡಿಯಾಲಾ ಜೈಲಿನಲ್ಲಿದ್ದಾರೆ.

‘ಪಂಜಾಬ್ ಮುಖ್ಯಮಂತ್ರಿಯ ಸೂಚನೆ ಮೇರೆಗೆ ಕೈದಿಯ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಲಾಗುತ್ತಿದೆ. ನಾನಿರುವ ಕೊಠಡಿಯಲ್ಲಿ ಬೆಳಕಿಲ್ಲ. ನನ್ನ ಕುಟುಂಬ ಸದಸ್ಯರಿಗೆ ಭೇಟಿ ಮಾಡುವ ಹಕ್ಕನ್ನು ಸಹ ನಿರಾಕರಿಸಲಾಗಿದೆ’ ಎಂದು ದೂರಿದ್ದಾರೆ.

ಜೈಲಿನ ಹೊರ ಠಾಣೆಯ ಪೊಲೀಸ್ ಅಧಿಕಾರಿಗಳಾದ ಜೈನಾಬ್ ಮತ್ತು ಐಜಾಜ್ ಅವರು ತಮ್ಮ ಕುಟುಂಬ ಸದಸ್ಯರಿಗೆ ಕಿರುಕುಳ ನೀಡಿದ್ದಾರೆ ಎಂದೂ ಆರೋಪಿಸಿದ್ದಾರೆ.

‘ಜೈಲಿನೊಳಗೆ ನನ್ನನ್ನು ಏಕಾಂಗಿಯಾಗಿ ಇಟ್ಟಿದ್ದಾರೆ. ವಕೀಲರ ಭೇಟಿಗೂ ಅವಕಾಶ ನೀಡುತ್ತಿಲ್ಲ. ಪತ್ರಿಕೆ ಓದಲು, ಟಿ.ವಿ ನೋಡಲು ಬಿಡುತ್ತಿಲ್ಲ. ಎರಡು ತಿಂಗಳಲ್ಲಿ ಕೇವಲ ನಾಲ್ಕು ಪುಸ್ತಕಗಳನ್ನಷ್ಟೇ ಕೊಟ್ಟಿದ್ದಾರೆ. ನನ್ನ ಪತ್ನಿ ಬುಶ್ರಾ ಬೀಬಿಗೂ ಹೀಗೆಯೇ ಮಾಡುತ್ತಿದ್ದಾರೆ’ ಎಂದು ಸಾಮಾಜಿಕ ಮಾಧ್ಯಮದಲ್ಲಿ ಇಮ್ರಾನ್ ಖಾನ್ ಬರೆದುಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.