ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಲ್‌ ಖಾದಿರ್‌ ಟ್ರಸ್ಟ್‌ ಪ್ರಕರಣ: ಜಾಮೀನು ಕೋರಿ ಇಮ್ರಾನ್‌ ಅರ್ಜಿ

Published 25 ನವೆಂಬರ್ 2023, 16:08 IST
Last Updated 25 ನವೆಂಬರ್ 2023, 16:08 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ‘ಅಲ್‌–ಖಾದಿರ್‌ ಟ್ರಸ್ಟ್‌’ ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರು ಜಾಮೀನು ಕೋರಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ.

ಪ್ರಕರಣದಲ್ಲಿ ಇಸ್ಲಾಮಾಬಾದ್ ಹೈಕೋರ್ಟ್‌ ನ. 14ರಂದು ಜಾಮೀನು ನಿರಾಕರಣೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ಇಮ್ರಾನ್‌ ಖಾನ್‌ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.  

ಪಾಕಿಸ್ತಾನದ ರಿಯಲ್‌ ಎಸ್ಟೇಟ್‌ ಸಂಸ್ಥೆಯೊಂದರಿಂದ ಲಂಚದ ರೂಪದಲ್ಲಿ ಕೋಟ್ಯಂತರ ರೂಪಾಯಿ ಹಣ ಮತ್ತು ಭೂಮಿಯನ್ನು ಪಡೆದ ಈ ಪ್ರಕರಣದಲ್ಲಿ ಖಾನ್‌ ಮತ್ತು ಅವರ ಪತ್ನಿ ಆರೋಪಿಗಳಾಗಿದ್ದಾರೆ. ಹಲವು ಪ್ರಕರಣಗಳಲ್ಲಿ ಆರೋಪಿಯಾಗಿರುವ ಖಾನ್‌ ರಾವಲ್ಪಿಂಡಿಯ ಆಡಿಯಾಲ ಜೈಲಿನಲ್ಲಿ ಸೆ.26ರಿಂದಲೂ ಬಂಧಿಯಾಗಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT