ಇಸ್ಲಾಮಾಬಾದ್: ಇಮ್ರಾನ್ ಖಾನ್ ಅವರನ್ನು ಜೈಲಿನಲ್ಲಿಡಲು ಅವರು ಎಸಗಿರುವ ಅಪರಾಧ ಕೃತ್ಯಗಳೇ ಸಾಕು ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸೀಫ್ ಅವರು ತಿಳಿಸಿದ್ದಾರೆ.
‘ನನ್ನನ್ನು ಶಾಶ್ವತವಾಗಿ ಜೈಲಿನಲ್ಲಿರಿಸುವ ಸಲುವಾಗಿ ಸರ್ಕಾರ ಸಂವಿಧಾನದಲ್ಲಿ ತಿದ್ದುಪಡಿ ಮಾಡಲು ಮುಂದಾಗಿದೆ’ ಎಂಬ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಅವರ ಆರೋಪವನ್ನು ಖವಾಜಾ ತಳ್ಳಿ ಹಾಕಿದ್ದಾರೆ.
‘ಪಾಕಿಸ್ತಾನ ತೆಹ್ರಿಕ್ ಇ–ಇನ್ಸಾಫ್ (ಪಿಟಿಐ) ಪಕ್ಷದ ಸಂಸ್ಥಾಪಕ ಇಮ್ರಾನ್ ಅಪರಾಧಗಳ ಪಟ್ಟಿಯನ್ನು ನೀಡಿದರೆ, ಅವರಿಗೆ ಶಿಕ್ಷೆ ನೀಡಲು ಸಂವಿಧಾನ ತಿದ್ದುಪಡಿಯ ಅವಶ್ಯಕತೆ ಇರುವುದಿಲ್ಲ’ ಎಂದು ಖವಾಜ ತಿಳಿಸಿದ್ದಾರೆ.
‘ಜೈಲಿನಲ್ಲಿರುವ ಇಮ್ರಾನ್ ಅವರು ಸಂವಿಧಾನ ತಿದ್ದುಪಡಿ ಮಾತ್ರವಲ್ಲದೇ ಪಾಕಿಸ್ತಾನದಲ್ಲಿ ನಡೆಯುವ ಎಲ್ಲ ಬೆಳವಣಿಗೆಗಳು ತನಗೆ ಸಂಬಂಧಿಸಿದ್ದು ಎಂದು ಭಾವಿಸಿದ್ದಾರೆ’ ಎಂದು ಹೇಳಿದ್ದಾರೆ.