ಶುಕ್ರವಾರ, 12 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನ: ‘ಸುನ್ನಿ ಇತ್ತೇಹಾದ್ ಕೌನ್ಸಿಲ್‘ ಜತೆಗೂಡಲಿರುವ ಇಮ್ರಾನ್ ಖಾನ್ ಪಕ್ಷ

Published 19 ಫೆಬ್ರುವರಿ 2024, 15:22 IST
Last Updated 19 ಫೆಬ್ರುವರಿ 2024, 15:22 IST
ಅಕ್ಷರ ಗಾತ್ರ

ಇಸ್ಲಾಮಾಬಾದ್: ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ತೆಹ್ರೀಕ್–ಎ–ಇನ್ಸಾಫ್ ಪಕ್ಷದ ಬೆಂಬಲಿತ ಸ್ವತಂತ್ರ ಅಭ್ಯರ್ಥಿಗಳು ಸುನ್ನಿ ಇತ್ತೇಹಾದ್ ಕೌನ್ಸಿಲ್ ಸೇರಲಿದ್ದಾರೆ ಎಂದು ಪಕ್ಷದ ಮೂಲಗಳು ಸೋಮವಾರ ತಿಳಿಸಿವೆ.

ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದ ರಾಷ್ಟ್ರೀಯ ಅಸೆಂಬ್ಲಿಯಲ್ಲಿನ ನಮ್ಮ ಪ್ರತಿನಿಧಿಗಳು. ಪಂಜಾಬ್, ಖೈಬರ್ ಫಖ್ತುಂಖ್ವಾ ಶಾಸನಸಭೆಗಳಲ್ಲಿನ ಪ್ರತಿನಿಧಿಗಳು ಸುನ್ನಿ ಇತ್ತೇಹಾದ್ ಕೌನ್ಸಿಲ್ ಸೇರಲಿದ್ದಾರೆ ಎಂದು ಪಕ್ಷದ ಅಧ್ಯಕ್ಷ ಗೋಹರ್ ಖಾನ್ ತಿಳಿಸಿದ್ದಾರೆ. 

ಚುನಾವಣೆಯಲ್ಲಿ ಗೆದ್ದ ಸ್ವತಂತ್ರ ಅಭ್ಯರ್ಥಿಗಳು ಫಲಿತಾಂಶ ಬಂದ ಮೂರು ದಿನಗಳಲ್ಲಿ ಯಾವುದಾದರೂ ಪಕ್ಷವನ್ನು ಸೇರಿಕೊಳ್ಳಬೇಕಾಗುತ್ತದೆ.

ಸುನ್ನಿ ಇಸ್ಲಾಂ ಪಂಗಡದ ಅನುಯಾಯಿಗಳನ್ನು ಪ್ರತಿನಿಧಿಸುವ ಸುನ್ನಿ ಇತ್ತೇಹಾದ್ ಕೌನ್ಸಿಲ್, ರಾಜಕೀಯ ಮತ್ತು ಧಾರ್ಮಿಕ ಗುಂಪುಗಳ ಮೈತ್ರಿಕೂಟವಾಗಿದೆ. 

ಪಾಕಿಸ್ತಾನದ ಸಂಸತ್ ಚುನಾವಣೆಯಲ್ಲಿ ತೆಹ್ರೀಕ್–ಎ–ಇನ್ಸಾಫ್‌ ಬೆಂಬಲಿತ ಸ್ವತಂತ್ರ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದಿದ್ದಾರೆ. ಆದರೆ, ಪಾಕಿಸ್ತಾನ್ ಮುಸ್ಲಿಂ ಲೀಗ್–ನವಾಜ್ (ಪಿಎಂಎಲ್‌–ಎನ್) ಮತ್ತು ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) ಜತೆಯಾಗಿ ಸರ್ಕಾರ ರಚಿಸುವುದಾಗಿ ಘೋಷಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT