ಮಂಗಳವಾರ, 10 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮೋದಿ ಜೊತೆ ಬಾಂಗ್ಲಾ ಜನರ ಸುರಕ್ಷತೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದ ಬೈಡನ್

Published 5 ಸೆಪ್ಟೆಂಬರ್ 2024, 2:54 IST
Last Updated 5 ಸೆಪ್ಟೆಂಬರ್ 2024, 2:54 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಕಳೆದ ವಾರ ಭಾರತದ ಪ್ರಧಾನಿ ನರೇಂದ್ರ ಮೋದಿ ಜೊತೆ ದೂರವಾಣಿ ಮಾತುಕತೆ ನಡೆಸಿದ್ದ ಅಮೆರಿಕ ಅಧ್ಯಕ್ಷ ಜೋ ಬೈಡನ್, ಬಾಂಗ್ಲಾದೇಶದ ಜನರ ಸುರಕ್ಷತೆ ಹಾಗೂ ಅಲ್ಲಿನ ಪ್ರಜಾಪ್ರಭುತ್ವ ಸಂಸ್ಥೆಗಳ ಬಗ್ಗೆ ಭವಿಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು ಎಂದು ಶ್ವೇತಭವನ ತಿಳಿಸಿದೆ.

ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ನಡೆದ ಬೆಳವಣಿಗೆ ಬಗ್ಗೆ ಜೋ ಬೈಡನ್‌ ಕಳವಳ ಹಂಚಿಕೊಂಡರು ಎಂದು ಶ್ವೇತಭವನದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್ ಕಿರ್ಬಿ ಬುಧವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಈ ಬಗ್ಗೆ ಆಗಸ್ಟ್ 26ರಂದು ಪ್ರಕಟಣೆ ಬಿಡುಗಡೆ ಮಾಡಿದ್ದ ಶ್ವೇತಭವನ, ಬಾಂಗ್ಲಾದೇಶದ ಬಗ್ಗೆ ಯಾವುದೇ ಉಲ್ಲೇಖ ಮಾಡಿರಲಿಲ್ಲ. ಆದರೆ ಪ್ರಧಾನಿ ಮೋದಿಯವರ ಕಚೇರಿಯ ಎಕ್ಸ್‌ ಪೋಸ್ಟ್‌ನಲ್ಲಿ ಬಾಂಗ್ಲಾದೇಶದ ಬಗ್ಗೆ ಚರ್ಚೆ ನಡೆಸಲಾಯಿತು ಎಂದು ಹೇಳಲಾಗಿತ್ತು.

‘ಉಭಯ ನಾಯಕರು ಬಾಂಗ್ಲಾದೇಶ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಅಲ್ಲಿನ ಕಾನೂನು ಮತ್ತು ಸುವ್ಯವಸ್ಥೆಯನ್ನು ಪುನಃಸ್ಥಾಪಿಸಲು ಮತ್ತು ಅಲ್ಪಸಂಖ್ಯಾತರ, ವಿಶೇಷವಾಗಿ ಹಿಂದೂಗಳ ಸುರಕ್ಷತೆ ಮತ್ತು ಭದ್ರತೆಯನ್ನು ಖಾತರಿಪಡಿಸುವ ಬಗ್ಗೆ ಒತ್ತು ನೀಡಿದರು’ ಎಂದು ‍ಪ್ರಧಾನಮಂತ್ರಿ ಕಚೇರಿ ತಿಳಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT