ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾಗತಿಕ ನಾಯಕರಿಂದ ಸ್ವಾತಂತ್ರ್ಯ ದಿನದ ಶುಭ ಹಾರೈಕೆ

Published 15 ಆಗಸ್ಟ್ 2023, 12:40 IST
Last Updated 15 ಆಗಸ್ಟ್ 2023, 12:40 IST
ಅಕ್ಷರ ಗಾತ್ರ

ಮಾಸ್ಕೊ/ವಾಷಿಂಗ್ಟನ್‌ (ಪಿಟಿಐ): ಭಾರತದ 77ನೇ ಸ್ವಾತಂತ್ರ್ಯ ದಿನಕ್ಕೆ ಜಾಗತಿಕ ನಾಯಕರು ಶುಭ ಹಾರೈಸಿದ್ದಾರೆ. ಜೊತೆಗೆ, ಭಾರತದೊಂದಿಗಿನ ತಮ್ಮ ಸಂಬಂಧದ ಕುರಿತು ಹರ್ಷ ವ್ಯಕ್ತಪಡಿಸಿದ್ದಾರೆ.

ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌, ಫ್ರಾನ್ಸ್‌ ಅಧ್ಯಕ್ಷ ಇಮಾನ್ಯುಯೆಲ್‌ ಮ್ಯಾಕ್ರನ್‌, ಆಸ್ಟ್ರೇಲಿಯ ಪ್ರಧಾನಿ ಆ್ಯಂಟನಿ ಅಲ್ಬನೀಸ್‌ ಮತ್ತು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕನ್‌ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಭ ಹಾರೈಕೆಯ ಸಂದೇಶ ರವಾನಿಸಿದ್ದಾರೆ.

‘ಭಾರತದೊಂದಿಗಿನ ನಮ್ಮ ವಿಶೇಷ ಮತ್ತು ಗೌರವಯುತವಾದ ಸಹಭಾಗಿತ್ವಕ್ಕೆ ನಾವು ಹೆಚ್ಚಿನ ಮಹತ್ವ ನೀಡುತ್ತೇವೆ. ಭಾರತವು ಜಾಗತಿಕ ಮಟ್ಟದಲ್ಲಿ ಉತ್ತಮ ಸ್ಥಾನ ಹೊಂದಿದೆ. ಅಂತರರಾಷ್ಟ್ರೀಯ ವ್ಯವಹಾರಗಳಲ್ಲಿ ಗುರುತರವಾದ ಮತ್ತು ರಚನಾತ್ಮಕವಾದ ಪಾತ್ರ ನಿರ್ವಹಿಸುತ್ತಿದೆ’ ಎಂದು ಪುಟಿನ್‌ ಸಂದೇಶ ನೀಡಿದ್ದಾರೆ.

ಎಕ್ಸ್‌ (ಟ್ವಿಟರ್‌) ವೇದಿಕೆ ಮೂಲಕ ಶುಭಾಶಯ ಕೋರಿರುವ ಫ್ರಾನ್ಸ್‌ ಅಧ್ಯಕ್ಷ ಇಮ್ಯಾನ್ಯುಯೆಲ್‌ ಮ್ಯಾಕ್ರನ್‌, ಭಾರತವು ಫ್ರಾನ್ಸ್‌ ಅನ್ನು ನಂಬಿಕಸ್ಥ ಸ್ನೇಹಿತ ಎಂದು ಭಾವಿಸಬಹುದು. ನಾನು ಮತ್ತು ನನ್ನ ಸ್ನೇಹಿತ ನರೇಂದ್ರ ಮೋದಿ ಅವರು ಭಾರತ– ಫ್ರಾನ್ಸ್‌ ನಡುವಿನ ಬಾಂಧವ್ಯಕ್ಕೆ ಸಂಬಂಧಿಸಿದಂತೆ ಮಹತ್ವದ ಗುರಿ ಹೊಂದಿದ್ದೇವೆ’ ಎಂದಿದ್ದಾರೆ. ಜೊತೆಗೆ ಭಾರತೀಯರಿಗೆ ಶುಭ ಹಾರೈಸಿದ್ದಾರೆ.

‘ಈ ಮಹತ್ವಪೂರ್ಣ ದಿನದಂದು ನಮ್ಮ ದ್ವಿಪಕ್ಷೀಯ ಸಹಭಾಗಿತ್ವದ ಆಳ ಅಗಲವನ್ನು ಬಿಂಬಿಸೋಣ, ನಾವು ನಿರ್ಮಿಸುತ್ತಿರುವ ಉಜ್ವಲ ಭವಿಷ್ಯದ ಪ್ರಮುಖ ಭಾಗವಾಗಿರುವ ಭಾರತೀಯರ ಹೆಮ್ಮೆಯ ಇತಿಹಾಸವನ್ನು ಸಂಭ್ರಮಿಸೋಣ’ ಎಂದು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕನ್ ಹೇಳಿದ್ದಾರೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಂಧವನ್ನು ಭವಿಷ್ಯದಲ್ಲಿ ಮತ್ತಷ್ಟು ಗಟ್ಟಿಗೊಳಿಸುವ ಇಂಗಿತ ವ್ಯಕ್ತಪಡಿಸಿರುವ ಆಸ್ಟ್ರೇಲಿಯಾ ಪ್ರಧಾನಿ ಆ್ಯಂಟನಿ ಅಲ್ಬನೀಸ್‌ ಅವರು, ‘ಭಾರತದ ಸ್ವಾತಂತ್ರ್ಯ ದಿನದಂದು ನಾವು ಉಭಯ ದೇಶಗಳ ಪ್ರಜಾಪ್ರಭುತ್ವವಾದಿ ಪರಂಪರೆಯನ್ನು ಸಂಭ್ರಮಿಸೋಣ’ ಎಂದಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT