ವಾಷಿಂಗ್ಟನ್: ಭಾರತವು ಕೃಷಿ ಮಾರುಕಟ್ಟೆಯಲ್ಲಿ ದೀರ್ಘಕಾಲದಿಂದ ತನ್ನ ಹಿತಾಸಕ್ತಿಯನ್ನು ಕಾಪಾಡಿಕೊಂಡು ಬಂದಿದೆ. ಅದರಿಂದ ಹೊರಬಂದು, ನಮ್ಮೊಂದಿಗೆ ಒಪ್ಪಂದ ಮಾಡಿಕೊಳ್ಳುವಂತೆ ಆ ದೇಶದ ಮನವೊಲಿಸುವುದು ಕಷ್ಟ ಎಂದು ಅಮೆರಿಕ ಹೇಳಿದೆ.

ಭಾರತ ಮತ್ತು ಅಮೆರಿಕ ನಿಯೋಗಗಳು ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಕುರಿತು ಮಾತುಕತೆ ನಡೆಸಿದವು. ಮೂರು ದಿನಗಳ ಈ ಸಭೆಯು ಬುಧವಾರ ಮುಕ್ತಾಯವಾಯಿತು.

ಕೇಂದ್ರ ವಾಣಿಜ್ಯ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ದರ್ಪಣ್ ಜೈನ್ ಅವರ ನೇತೃತ್ವದ 12 ಸದಸ್ಯರ ನಿಯೋಗವು, ದಕ್ಷಿಣ ಮತ್ತು ಕೇಂದ್ರ ಏಷ್ಯಾದಲ್ಲಿನ ಅಮೆರಿಕದ ವ್ಯಾಪಾರ ಪ್ರತಿನಿಧಿ (ಯುಎಸ್ಟಿಆರ್) ಬ್ರೆಂಡನ್ ಲಿಂಚ್ ಅವರ ನೇತೃತ್ವದ ಅಮೆರಿಕ ನಿಯೋಗದೊಂದಿಗೆ ಮಾತುಕತೆ ನಡೆಸಿತು.

‘ಈ ಒಪ್ಪಂದದ ಭಾಗವಾಗಿ ಭಾರತವು ತನ್ನ ಕೃಷಿ ಮಾರುಕಟ್ಟೆಯ ಹಿತಾಸಕ್ತಿಗಳನ್ನು ಕಾಪಾಡಿಕೊಳ್ಳಲು ಹೆಚ್ಚಾಗಿ ಬಯಸುತ್ತದೆ. ಆದರೂ ಪರಸ್ಪರ ಒಪ್ಪಂದ ಮಾಡಿಕೊಳ್ಳಬಹುದಾದ ಅನೇಕ ವಿಷಯಗಳಿವೆ’ ಎಂದು ಯುಎಸ್ಟಿಆರ್ ಜೆಮಿಸನ್ ಗ್ರೀರ್ ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-51-1192174841

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.