ಟೊಕಿಯೊ: ‘ಪರಸ್ಪರ ಗೌರವ, ಆಸಕ್ತಿ ಮತ್ತು ಸೂಕ್ಷ್ಮತೆಯ ಆಧಾರದ ಮೇಲೆ ದೀರ್ಘಕಾಲೀನ ದೃಷ್ಟಿಕೋನದಿಂದ ದ್ವಿಪಕ್ಷೀಯ ಸಂಬಂಧಗಳನ್ನು ಮುನ್ನಡೆಸಲು ನಾವು ಸಿದ್ಧರಿದ್ದೇವೆ. ಜಾಗತಿಕ ಆರ್ಥಿಕತೆಯಲ್ಲಿ ಸ್ಥಿರತೆ ಕಾಯ್ದುಕೊಳ್ಳಲು ಭಾರತ-ಚೀನಾ ಒಟ್ಟಾಗಿ ಕೆಲಸ ಮಾಡಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಜಪಾನ್ ಭೇಟಿಯ ಸಂದರ್ಭದಲ್ಲಿ ಮೋದಿ ಅವರು ‘ದಿ ಯೋಮಿಯುರಿ ಶಿಂಬುನ್’ ಸಂದರ್ಶನದಲ್ಲಿ ಮಾತನಾಡಿದ್ದಾರೆ. ‘ಎರಡು ನೆರೆಹೊರೆಯ ಮತ್ತು ಜಗತ್ತಿನ ದೊಡ್ಡ ರಾಷ್ಟ್ರಗಳಾಗಿ ಭಾರತ ಮತ್ತು ಚೀನಾ ನಡುವಿನ ಸೌಹಾರ್ದಯುತ ದ್ವಿಪಕ್ಷೀಯ ಸಂಬಂಧಗಳು ಪ್ರಾದೇಶಿಕ ಮತ್ತು ಜಾಗತಿಕ ಶಾಂತಿ ಮತ್ತು ಸಮೃದ್ಧಿಯ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತವೆ’ ಎಂದು ಅವರು ಪ್ರತಿಪಾದಿಸಿದ್ದಾರೆ.

ಇದೇ ವೇಳೆ ಚೀನಾದೊಂದಿಗಿನ ಸಂಬಂಧ ಸುಧಾರಿಸುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಮೋದಿ, ‘ಚೀನಾದ ಅಧ್ಯಕ್ಷ ಷಿ–ಜಿನ್ಪಿಂಗ್ ಅವರ ಆಹ್ವಾನದ ಮೇರೆಗೆ ನಾನು ಇಲ್ಲಿಂದ (ಜಪಾನ್) ಟಿಯಾನ್ ಜಿನ್ನಲ್ಲಿ ನಡೆಸಲಿರುವ ಶಾಂಘೈ ಸಹಕಾರ ಸಂಘಟನೆಯ (ಎಸ್ಸಿಒ) ಶೃಂಗಸಭೆಯಲ್ಲಿ ಭಾಗವಹಿಸಲು ತೆರಳುತ್ತಿದ್ದೇನೆ. ಕಳೆದ ವರ್ಷ ಕಜಾನ್ನಲ್ಲಿ ಜಿನ್ಪಿಂಗ್ ಅವರೊಂದಿಗಿನ ನನ್ನ ಭೇಟಿಯ ನಂತರ ನಮ್ಮ ದ್ವಿಪಕ್ಷೀಯ ಸಂಬಂಧಗಳಲ್ಲಿ ಸ್ಥಿರ ಮತ್ತು ಸಕಾರಾತ್ಮಕ ಪ್ರಗತಿ ಕಂಡುಬಂದಿದೆ’ ಎಂದು ಹೇಳಿದ್ದಾರೆ.

ಪ್ರಸ್ತುತ ವಿಶ್ವ ಆರ್ಥಿಕತೆಯಲ್ಲಿನ ಅಸ್ಥಿರತೆಯನ್ನು ಗಮನದಲ್ಲಿಟ್ಟುಕೊಂಡು ಭಾರತ ಮತ್ತು ಚೀನಾ ಒಟ್ಟಾಗಿ ಕೆಲಸ ಮಾಡುವುದು ಮುಖ್ಯ ಎಂದು ಅವರು ವಿವರಿಸಿದ್ದಾರೆ.

ಟಿಯಾನ್ ಜಿನ್ನಲ್ಲಿ ಭಾನುವಾರದಿಂದ ಆರಂಭವಾಗಲಿರುವ ಶಾಂಘೈ ಶೃಂಗಸಭೆ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನಾದ ಅಧ್ಯಕ್ಷ ಷಿ–ಜಿನ್ಪಿಂಗ್ ಅವರು ಎರಡು ದ್ವಿಪಕ್ಷೀಯ ಸಭೆಗಳನ್ನು ನಡೆಸುವ ನಿರೀಕ್ಷೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.