ವಿಶ್ವಸಂಸ್ಥೆ: ಉಕ್ರೇನಿನಝಪೋರಿಝ್ಯಾ ಪರಮಾಣು ವಿದ್ಯುತ್ ಸ್ಥಾವರ ಸಮೀಪವೇ ರಷ್ಯಾ–ಉಕ್ರೇನ್ ಗುಂಡಿನ ದಾಳಿ ನಡೆಸುತ್ತಿರುವ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ಇದು ಜನರ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಹಾಗಾಗಿ ಉಭಯ ದೇಶಗಳು ಪರಮಾಣು ಘಟಕದ ಸುರಕ್ಷತೆ ಮತ್ತು ಭದ್ರತೆಗೆ ಗಮನ ನೀಡಬೇಕು ಎಂದು ಕರೆ ನೀಡಿದೆ.

ಈ ಸಂಬಂಧ ಚರ್ಚೆಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಗುರುವಾರ ತುರ್ತು ಸಭೆ ಕರೆದಿತ್ತು. ಈ ವೇಳೆವಿಶ್ವಸಂಸ್ಥೆಯ ಭಾರತದ ಕಾಯಂ ಪ್ರತಿನಿಧಿ ರುಚಿರಾ ಕಂಬೋಜ್, ‘ಪರಮಾಣು ಘಟಕದ ಸುರಕ್ಷತೆ ಮತ್ತು ಭದ್ರತೆ ಉದ್ದೇಶದಿಂದ ಘಟಕದ ಸುತ್ತ ನಡೆಯುತ್ತಿರುವ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಉಭಯ ದೇಶಗಳ ದಾಳಿಯಿಂದ ಉಂಟಾಗುವ ಯಾವುದೇ ಹಾನಿಯು ಸಾರ್ವಜನಿಕ ಆರೋಗ್ಯ ಮತ್ತು ಪರಿಸರದ ಮೇಲೆ ಗಂಭೀರ ಪರಿಣಾಮ ಬೀರಲಿದೆ’ ಎಂದು ಎಚ್ಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.