ಕಠ್ಮಂಡು: ಆರೋಗ್ಯ ಮತ್ತು ಶೈಕ್ಷಣಿಕ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಸಂಸ್ಥೆಗಳಿಗೆ ಭಾರತವು 84 ವಾಹನಗಳನ್ನು ಉಡುಗೊರೆಯಗಿ ನೀಡಿದೆ ಎಂದು ನೇಪಾಳದಲ್ಲಿನ ಭಾರತೀಯ ರಾಯಭಾರ ಕಚೇರಿ ಹೇಳಿದೆ.
34 ಅಂಬುಲೆನ್ಸ್ ಮತ್ತು 50 ಶಾಲಾ ಬಸ್‌ಗಳ ಕೀಗಳನ್ನು ಭಾರತೀಯ ರಾಯಭಾರಿ ನವೀನ್ ಶ್ರೀವಾಸ್ತವ ಅವರು ಶಿಕ್ಷಣ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಅಶೋಕ್ ಕುಮಾರ್ ಅವರ ಉಪಸ್ಥಿತಿಯಲ್ಲಿ ಸಂಸ್ಥೆಗಳಿಗೆ ಹಸ್ತಾಂತರಿಸಿದರು. ಈ ಬಗ್ಗೆ ನೇಪಾಳದಲ್ಲಿನ ಭಾರತೀಯ ರಾಯಭಾರ ಕಚೇರಿ ಟ್ವಿಟರ್‌ನಲ್ಲಿ ಫೋಟೊಗಳನ್ನು ಹಂಚಿಕೊಂಡಿದೆ.