ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದೊಟ್ಟಿಗಿನ ಸಂಬಂಧ ಬದಲಾಗದು: ಅಮೆರಿಕ

Published 16 ಏಪ್ರಿಲ್ 2024, 14:06 IST
Last Updated 16 ಏಪ್ರಿಲ್ 2024, 14:06 IST
ಅಕ್ಷರ ಗಾತ್ರ

ವಾಷಿಂಗ್ಟನ್: ಭಾರತವು ಅಮೆರಿಕದ ಪ್ರಮುಖ ಕಾರ್ಯತಂತ್ರ ಪಾಲುದಾರ ರಾಷ್ಟ್ರ ಮತ್ತು ಈ ಎರಡೂ ದೇಶಗಳ ನಡುವಿನ ಸಂಬಂಧದಲ್ಲಿ ಯಾವುದೇ ಬದಲಾವಣೆಯಾಗದು ಎಂಬ ನಿರೀಕ್ಷೆಯಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರ ಆಡಳಿತ ಪ್ರತಿಪಾದಿಸಿದೆ.

ಭಾರತದಲ್ಲಿ ಲೋಕಸಭೆ ಚುನಾವಣೆಗೆ ಮುನ್ನ ಭಾರತ ಸರ್ಕಾರವನ್ನು ಟೀಕಿಸುವ ಕೆಲವು ವರದಿಗಳು, ಲೇಖನಗಳು ಮತ್ತು ಅಭಿಪ್ರಾಯ ತುಣುಕುಗಳು ಬರುತ್ತಿವೆ. ಈ ಕಾರಣದಿಂದಾಗಿ ಉಭಯ ದೇಶಗಳ ನಡುವಿನ ಸಂಬಂಧ ಹೇಗಿರಲಿದೆ ಎಂದು ಕೇಳಿದ ಪ್ರಶ್ನೆಗೆ, ಅಮೆರಿಕದ ವಿದೇಶಾಂಗ ಇಲಾಖೆಯ ವಕ್ತಾರ ಮ್ಯಾಥ್ಯೂ ಮಿಲ್ಲರ್ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಉತ್ತರಿಸಿದರು. 

ಅಮೆರಿಕದ ಸಿಖ್ ಪ್ರತ್ಯೇಕವಾದಿ ಚಳವಳಿ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನದ ಕುರಿತು ಅಮೆರಿಕ ವಿದೇಶಾಂಗ ಇಲಾಖೆಯು ನೀಡಿದ್ದ ಹೇಳಿಕೆಗೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT