ಜೆರುಸಲೇಮ್: ಸಿಡ್ನಿಯ ಬೋಂಡಿ ಬೀಚ್ನ ‘ಹನುಕ್ಕಾ ಯಹೂದಿ ಹಬ್ಬ’ದ ಸಂದರ್ಭದಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿದ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್, ‘ಭಾರತ ಮತ್ತು ಇಸ್ರೇಲ್ ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿಯನ್ನು ಹೊಂದಿವೆ’ ಎಂದು ಹೇಳಿದರು.

ಎರಡು ದಿನಗಳ ಭೇಟಿಗಾಗಿ ಮಂಗಳವಾರ ಇಸ್ರೇಲ್ಗೆ ಭೇಟಿ ನೀಡಿದ ಜೈಶಂಕರ್ ಅಲ್ಲಿನ ವಿದೇಶಾಂಗ ವ್ಯವಹಾರಗಳ ಸಚಿವ ಗಿಡಿಯಾನ್ ಮೋಶೆ ಸಾರ್ ಅವರೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಈ ಹೇಳಿಕೆ ನೀಡಿದರು.

‘ಹನುಕ್ಕಾ’ ಆಚರಣೆಯಲ್ಲಿ ನಡೆದ ದಾಳಿಯಿಂದ ಉಂಟಾದ ಜೀವಹಾನಿಗೆ ತೀವ್ರ ಸಂತಾಪ ಸೂಚಿಸುತ್ತೇನೆ. ನಾವು ಭಯೋತ್ಪಾದನೆಯನ್ನು ಪ್ರಬಲವಾಗಿ ಖಂಡಿಸುತ್ತೇವೆ. ಅದರ ವಿರುದ್ಧದ ನಮ್ಮ ಹೋರಾಟಕ್ಕೆ ಇಸ್ರೇಲ್ ನೀಡುತ್ತಿರುವ ನಿರಂತರ ಬೆಂಬಲವು ಪ್ರಶಂಸನಾರ್ಹವಾದದ್ದು’ ಎಂದರು.

‘ಕಳೆದ ದಶಕದಲ್ಲಿ ಗಮನಾರ್ಹವಾಗಿ ಅಭಿವೃದ್ಧಿ ಹೊಂದಿದ ಎರಡೂ ದೇಶಗಳ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯ ಕುರಿತು ಚರ್ಚಿಸಲಾಗುವುದು’ ಎಂದು ಹೇಳಿದರು.

ಗಾಜಾ ಶಾಂತಿ ಯೋಜನೆಗೆ ಭಾರತದ ಬೆಂಬಲವನ್ನು ಪುನರುಚ್ಚರಿಸಿದ ಸಚಿವರು, ‘ಇದು ಶಾಶ್ವತ ಮತ್ತು ಉತ್ತಮ ಪರಿಹಾರವನ್ನು ಕಲ್ಪಿಸುತ್ತದೆ’ ಎಂದು ಭರವಸೆ ವ್ಯಕ್ತಪಡಿಸಿದರು.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಭಾರತ ಪ್ರವಾಸಕ್ಕೆ ಸಿದ್ಧತೆಗಳು ನಡೆಯುತ್ತಿರುವ ಹೊತ್ತಿನಲ್ಲೇ ಜೈಶಂಕರ್ ಅಲ್ಲಿಗೆ ಭೇಟಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.