ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತವು ನವಜಾತ ಶಿಶು ಮರಣ ತಗ್ಗಿಸುವಲ್ಲಿ ಗುರಿ ಸಾಧನೆ ಸಾಧ್ಯತೆ: ಡಬ್ಲ್ಯುಎಚ್‌ಒ

Published 16 ಮೇ 2023, 12:50 IST
Last Updated 16 ಮೇ 2023, 12:50 IST
ಅಕ್ಷರ ಗಾತ್ರ

ಕೇಪ್‌ಟೌನ್ (ದಕ್ಷಿಣ ಆಫ್ರಿಕಾ): ನವಜಾತ ಶಿಶುಗಳ ಮರಣ ಪ್ರಮಾಣವನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಭಾರತವು ಸಾಕಷ್ಟು ಕ್ರಮಗಳನ್ನು ತೆಗೆದುಕೊಂಡಿದೆ. ಹಾಗಾಗಿ, ಭಾರತವು ಈ ಕ್ಷೇತ್ರಕ್ಕೆ ಸಂಬಂಧಿಸಿ ನಿಗದಿಪಡಿಸಿರುವ ‘ಸುಸ್ಥಿರ ಅಭಿವೃದ್ಧಿ ಗುರಿ’ಯನ್ನು 2030ರ ವೇಳೆಗೆ ಸಾಧಿಸುವ ಸಾಧ್ಯತೆ ಇದೆ ಎಂದು ವಿಶ್ವಸಂಸ್ಥೆ ಹೇಳಿದೆ.

ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಎಚ್‌ಒ) ತಾಯಿ, ನವಜಾತ ಶಿಶು, ಮಕ್ಕಳು ಹಾಗೂ ವಯಸ್ಕರ ಆರೋಗ್ಯ ಹಾಗೂ ವೃದ್ಧಾಪ್ಯ ವಿಭಾಗದ ನಿರ್ದೇಶಕ ಅಂಶು ಬ್ಯಾನರ್ಜಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

2016ರಿಂದ 2021ರ ವರೆಗಿನ ಅವಧಿಯಲ್ಲಿ ಪ್ರತಿ ವರ್ಷ ನವಜಾತ ಶಿಶುಗಳ ಮರಣ ಪ್ರಮಾಣದಲ್ಲಿ ಕಂಡುಬಂದ ಇಳಿಕೆಗೆ ಸಂಬಂಧಿಸಿದ ದತ್ತಾಂಶಗಳನ್ನು ಉಲ್ಲೇಖಿಸಿ ಅವರು ಈ ಮಾತು ಹೇಳಿದ್ದಾರೆ.

ಅವರು ಇಲ್ಲಿ ಇತ್ತೀಚೆಗೆ ನಡೆದ ತಾಯಂದಿರ, ನವಜಾತ ಶಿಶುಗಳ ಆರೋಗ್ಯಕ್ಕೆ ಸಂಬಂಧಿಸಿದ ಅಂತರರಾಷ್ಟ್ರೀಯ ಸಮಾವೇಶದಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಸುದ್ದಿಸಂಸ್ಥೆ ಜೊತೆ ಮಾತನಾಡಿದರು.

‘ಪ್ರಸವ ಹಾಗೂ ಶಿಶು ಜನನ ಸಂದರ್ಭದಲ್ಲಿನ ಆರೈಕೆಗೆ ಸಂಬಂಧಿಸಿ ಗುಣಮಟ್ಟ ಹೆಚ್ಚಿಸಲು ಭಾರತ ಮಹತ್ವದ ಕ್ರಮಗಳನ್ನು ತೆಗೆದುಕೊಂಡಿದೆ. ಇದರಿಂದ ತಾಯಂದಿರ ಮರಣ ಪ್ರಮಾಣ ಕಡಿಮೆಯಾಗಿದೆ. ನವಜಾತ ಶಿಶು ಮರಣ ಪ್ರಮಾಣವನ್ನು ತಗ್ಗಿಸುವಲ್ಲಿಯೂ ಇದು ಸಹಕಾರಿಯಾಗಿದೆ’ ಎಂದು ಡಾ.ಬ್ಯಾನರ್ಜಿ ಹೇಳಿದ್ದಾರೆ.

‘ನವಜಾತ ಶಿಶುವಿನ ಆರೈಕೆಗೆ ಸಂಬಂಧಿಸಿ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಮಟ್ಟದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಕೂಡ ಭಾರತ ಜಾರಿಗೊಳಿಸಿದೆ. ಅವಧಿಪೂರ್ವ ಜನಿಸುವ, ಅನಾರೋಗ್ಯ ಪೀಡಿತ ಮಕ್ಕಳ ಆರೈಕೆ ಕುರಿತ ಸೌಲಭ್ಯಗಳ ಗುಣಮಟ್ಟವನ್ನು ಹೆಚ್ಚಿಸುವ ಅಗತ್ಯವಿದೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT