ಭಾರತದಲ್ಲಿ ಹೂಡಿಕೆ ಮಾಡಲು ಮತ್ತು ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಅಪಾರ ಅವಕಾಶಗಳಿವೆ. ಅದಕ್ಕಾಗಿ ಡಚ್ ಕಂಪನಿಗಳನ್ನು ಸ್ವಾಗತಿಸುತ್ತೇನೆ
– ನರೇಂದ್ರ ಮೋದಿ, ಪ್ರಧಾನಿ
ಪಹಲ್ಗಾಮ್ ದಾಳಿಗೆ ಖಂಡನೆ
2025ರ ಏಪ್ರಿಲ್‌ನಲ್ಲಿ ಪಹಲ್ಗಾಮ್ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಜಟ್ಟೆನ್ ಬಲವಾಗಿ ಖಂಡಿಸಿದರು ಎಂದು ಜಂಟಿ ಹೇಳಿಕೆ ತಿಳಿಸಿದೆ. ಅಲ್ಲದೆ ಗಡಿಯಾಚೆಗಿನ ಭಯೋತ್ಪಾದನೆ ಸೇರಿದಂತೆ ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದೂ ಅದು ಹೇಳಿದೆ. ಉಭಯ ದೇಶಗಳ ನಡುವಿನ ಸಂಬಂಧ ಒಂದು ದಶಕದಲ್ಲಿ ಗಮನಾರ್ಹ ಪ್ರಗತಿ ಕಂಡುಬಂದಿದೆ. ಭಾರತವು ನೆದರ್ಲೆಂಡ್ಸ್ ಅನ್ನು ಐತಿಹಾಸಿಕವಾಗಿ ತನ್ನ ಪ್ರಮುಖ ಪಾಲುದಾರ ದೇಶಗಳಲ್ಲಿ ಒಂದು ಎಂದು ಪರಿಗಣಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಕಾಯಂ ಸದಸ್ಯತ್ವ ಕಲ್ಪಿಸುವ ವಿಚಾರಕ್ಕೆ ಬೆಂಬಲ ವ್ಯಕ್ತಪಡಿಸಿರುವ ನೆದರ್ಲೆಂಡ್ಸ್‌ಗೆ ಪ್ರಧಾನಿ ಮೋದಿ ಇದೇ ವೇಳೆ ಧನ್ಯವಾದ ಅರ್ಪಿಸಿದರು.