ನ್ಯೂಯಾರ್ಕ್/ವಾಷಿಂಗ್ಟನ್: ಭಾರತ-ಪಾಕಿಸ್ತಾನ ನಡುವಿನ ಸಂಘರ್ಷವನ್ನು ಕೊನೆಗೊಳಿಸಿದ್ದು ನಾನೇ ಎಂಬ ತಮ್ಮ ಹೇಳಿಕೆಯನ್ನು ಪುನರುಚ್ಛರಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಈವರೆಗೆ ನಾನು ಎಂಟು ಯುದ್ಧಗಳನ್ನು ನಿಲ್ಲಿಸಿದ್ದು, ಪ್ರತಿಯೊಂದಕ್ಕೂ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಕೊಡಬೇಕು ಎಂದು ಪ್ರತಿಪಾದಿಸಿದ್ದಾರೆ.

‘ನಾವು ಎಂಟು ಯುದ್ಧಗಳನ್ನು ಕೊನೆಗೊಳಿಸಿದ್ದೇವೆ.. ಈಗ ಮತ್ತೊಂದು ಯುದ್ಧವನ್ನು ಅಂತ್ಯಗೊಳಿಸುವ ವಿಶ್ವಾಸವಿದೆ’ಎಂದು ಟ್ರಂಪ್ ರಷ್ಯಾ-ಉಕ್ರೇನ್ ಯುದ್ಧವನ್ನು ಉಲ್ಲೇಖಿಸಿ ಹೇಳಿದ್ದಾರೆ.

‘ನಾನು ರಷ್ಯಾ–ಉಕ್ರೇನ್ ನಡುವಿನ ಯುದ್ಧ ಕೊನೆಗೊಳಿಸಿದರೆ ನೊಬೆಲ್ ಪ್ರಶಸ್ತಿ ಸಿಗಲಿದೆ ಎಂದು ಎಲ್ಲರೂ ಹೇಳುತ್ತಿದ್ದಾರೆ. ಆದರೆ, ಭಾರತ ಮತ್ತು ಪಾಕಿಸ್ತಾನ ಸೇರಿದಂತೆ ಇತರೆ ಎಂಟು ಯುದ್ಧಗಳನ್ನು ನಿಲ್ಲಿಸಿದ್ದರ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ಆ ಎಂಟು ಯುದ್ಧ ನಿಲ್ಲಿಸಿದ್ದಕ್ಕಾಗಿ ಪ್ರತಿಯೊಂದಕ್ಕೂ ನೊಬೆಲ್ ಸಿಗಬೇಕಿದೆ’ ಎಂದಿದ್ದಾರೆ.

ಮೇ 10ರಂದು, ಅಮೆರಿಕ ಮಧ್ಯಸ್ಥಿಕೆಯಲ್ಲಿ ಸುದೀರ್ಘ ಮಾತುಕತೆಯ ನಂತರ ಭಾರತ ಮತ್ತು ಪಾಕಿಸ್ತಾನ ದೇಶಗಳು ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದಾಗಿನಿಂದ, ಯುದ್ಧ ನಿಲ್ಲಿಸಿದ್ದು ನಾನೇ ಎಂದು 60ಕ್ಕೂ ಹೆಚ್ಚು ಬಾರಿ ತಮ್ಮ ಹೇಳಿಕೆಯನ್ನು ಪುನರಾವರ್ತಿಸಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ಯುದ್ಧ ವಿರಾಮದಲ್ಲಿ ಯಾವುದೇ ಮೂರನೇ ವ್ಯಕ್ತಿಯ ಹಸ್ತಕ್ಷೇಪವನ್ನು ಭಾರತ ನಿರಾಕರಿಸಿದೆ.

ಏಪ್ರಿಲ್ 22ರಂದು 26 ನಾಗರಿಕರು ಹತ್ಯೆಯಾದ ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತವು ಮೇ 7ರಂದು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕರ ನೆಲೆಗಳನ್ನು ಗುರಿಯಾಗಿಸಿಕೊಂಡು ಆಪರೇಷನ್ ಸಿಂಧೂರವನ್ನು ಪ್ರಾರಂಭಿಸಿತ್ತು. ನಾಲ್ಕು ದಿನಗಳ ತೀವ್ರ ಗಡಿಯಾಚೆಗಿನ ಡ್ರೋನ್ ಮತ್ತು ಕ್ಷಿಪಣಿ ದಾಳಿಯ ನಂತರ ಮೇ 10ರಂದು ಸಂಘರ್ಷವನ್ನು ಕೊನೆಗೊಳಿಸಲು ಭಾರತ ಮತ್ತು ಪಾಕಿಸ್ತಾನ ಒಪ್ಪಂದಕ್ಕೆ ಬಂದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.