ಇಸ್ಲಾಮಾಬಾದ್: ಭಾರತ ದಾಳಿ ನಿಲ್ಲಿಸಿದರೆ ಉದ್ವಿಗ್ನತೆ ಶಮನಕ್ಕೆ ಸಿದ್ಧ ಎಂದು ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್ ಬುಧವಾರ ಹೇಳಿದ್ದಾರೆ.

ಭಾರತ ಉಗ್ರರ ನೆಲೆ ಗುರಿಯಾಗಿಸಿ ಏರ್ಸ್ಟ್ರೈಕ್ ಮಾಡಿದ ನಂತರ ಪಾಕಿಸ್ತಾನ ರಕ್ಷಣಾ ಸಚಿವರಿಂದ ಈ ಪ್ರತಿಕ್ರಿಯೆ ಬಂದಿದೆ. ದಾಳಿ ಮಾಡಿದರೆ ಮಾತ್ರ ಪಾಕಿಸ್ತಾನ ಪ್ರತಿಕ್ರಿಯಿಸುತ್ತದೆ ಎಂದು ಆಸಿಫ್ ಹೇಳಿರುವುದಾಗಿ ಬ್ಲೂಮ್ಬರ್ಗ್ ಟೆಲಿವಿಷನ್ ವರದಿ ಮಾಡಿರುವುದಾಗಿ ಪಿಟಿಐ ವರದಿ ತಿಳಿಸಿದೆ.

ಕಳೆದ ಹದಿನೈದು ದಿನಗಳಿಂದ ನಾವು ಭಾರತದ ವಿರುದ್ಧ ಯಾವುದೇ ಹಗೆಯ ಕ್ರಮ ಕೈಗೊಳ್ಳುವುದಿಲ್ಲ ಎಂದು ಹೇಳುತ್ತಿದ್ದೇವೆ. ಆದರೆ ನಮ್ಮ ಮೇಲೆ ದಾಳಿ ನಡೆದರೆ, ನಾವು ಪ್ರತಿಕ್ರಿಯಿಸುತ್ತೇವೆ. ಭಾರತ ಹಿಂದೆ ಸರಿದರೆ, ನಾವು ಖಂಡಿತವಾಗಿಯೂ ಈ ಉದ್ವಿಗ್ನತೆಯನ್ನು ಶಮನಗೊಳಿಸುತ್ತೇವೆ ಎಂದಿದ್ದಾರೆ.

ಉಭಯ ದೇಶಗಳ ಮಾತುಕತೆಯ ಸಾಧ್ಯತೆಯ ಬಗ್ಗೆ ಮಾತನಾಡಿದ ಸಚಿವರು, ಅಂತಹ ಯಾವುದೇ ಸಂಭಾವ್ಯ ಮಾತುಕತೆಗಳ ಬಗ್ಗೆ ತಿಳಿದಿಲ್ಲ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.