ಟೋಕಿಯೊ: ಭಾರತ ಮತ್ತು ಪಾಕಿಸ್ತಾನ ನಡುವಣ ಯುದ್ಧವನ್ನು ನಿಲ್ಲಿಸಿರುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಪುನರುಚ್ಚರಿಸಿದ್ದಾರೆ.

ಜಪಾನ್ ಪ್ರವಾಸದ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟ್ರಂಪ್, ಈ ಕುರಿತು ಪ್ರಸ್ತಾಪಿಸಿದ್ದಾರೆ.

'ಸುಂಕದ ವಿಷಯ ಮುಂದಿಟ್ಟುಕೊಂಡು ನಾನು ಹಲವು ಯುದ್ಧಗಳನ್ನು ನಿಲ್ಲಿಸಿದ್ದೇನೆ. ಭಾರತ ಮತ್ತು ಪಾಕಿಸ್ತಾನ ಪರಮಾಣು ಸಾಮರ್ಥ್ಯದ ಮಹಾನ್ ಶಕ್ತಿಯಾಗಿವೆ. ಏಳು ಸುಂದರ ಹಾಗೂ ಅತಿ ನೂತನ ಯುದ್ಧ ವಿಮಾನಗಳನ್ನು ಹೊಡೆದುರುಳಿಸಲಾಗಿತ್ತು' ಎಂದು ಟ್ರಂಪ್ ಹೇಳಿದ್ದಾರೆ.

ಕದನ ವಿರಾಮ ಮಾಡದಿದ್ದರೆ ವ್ಯಾಪಾರವನ್ನು ನಿಲ್ಲಿಸುವುದಾಗಿ ಭಾರತ ಪ್ರಧಾನಿ ನರೇಂದ್ರ ಮೋದಿ, ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಸೇನಾ ಮುಖ್ಯಸ್ಥ ಅಸೀಮ್ ಮುನೀರ್ಗೆ ಎಚ್ಚರಿಸಿರುವುದಾಗಿ ಟ್ರಂಪ್ ಹೇಳಿದ್ದಾರೆ.

'ಎರಡೂ ರಾಷ್ಟ್ರಗಳು ನಮ್ಮ ಮಾತಿಗೆ ಬದ್ಧವಾಗಿ ನಡೆದುಕೊಂಡಿತ್ತು. 24 ತಾಸಿನೊಳಗೆ ಯುದ್ಧ ಕೊನೆಗೊಂಡಿತ್ತು. ಇದು ನಿಜಕ್ಕೂ ಅದ್ಭುತ' ಎಂದು ಹೇಳಿದ್ದಾರೆ.
.ಗಾಜಾ ಕದನ ವಿರಾಮಕ್ಕೆ ಅಪಾಯ ಇಲ್ಲ: ಡೊನಾಲ್ಡ್ ಟ್ರಂಪ್.ದಕ್ಷಿಣ ಕೊರಿಯಾಕ್ಕೆ ಟ್ರಂಪ್ ಭೇಟಿ; ಕ್ಷಿಪಣಿ ಹಾರಿಸಿದ ಉತ್ತರ ಕೊರಿಯಾ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.