ವಿಶ್ವಸಂಸ್ಥೆ: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (ಯುಎನ್ಜಿಎ) ಜಮ್ಮು ಮತ್ತು ಕಾಶ್ಮೀರ ವಿಷಯಕ್ಕೆ ಸಂಬಂಧಿಸಿದಂತೆ ಮತ್ತೆ ತಗಾದೆ ಎತ್ತಿರುವ ಪಾಕಿಸ್ತಾನಕ್ಕೆ ಭಾರತ ತಿರುಗೇಟು ನೀಡಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ರಾಯಭಾರಿ ಪಿ. ಹರೀಶ್, 'ಎಂದಿನಂತೆ ಭಾರತದ ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಕುರಿತು ಪಾಕಿಸ್ತಾನದ ಮಾಜಿ ವಿದೇಶಾಂಗ ಕಾರ್ಯದರ್ಶಿ ಅಸಮರ್ಥನೀಯ ಆರೋಪವನ್ನು ಮಾಡಿದ್ದಾರೆ' ಎಂದು ಹೇಳಿದ್ದಾರೆ.

ಗಡಿಯಾಚೆಗಿನ ಭಯೋತ್ಪಾದನೆ ಹಬ್ಬುವುದರಲ್ಲಿ ಪಾಕಿಸ್ತಾನದ ಪಾತ್ರವನ್ನು ಅವರು ಟೀಕಿಸಿದ್ದಾರೆ.

'ಆ ದೇಶದ ಮತಾಂಧ ಮನಸ್ಥಿತಿ ಎಲ್ಲರಿಗೂ ತಿಳಿದಿದೆ. ಜಮ್ಮು ಮತ್ತು ಕಾಶ್ಮೀರದ ಭಾರತದ ಅವಿಭಾಜ್ಯ ಅಂಗವಾಗಿತ್ತು. ಈಗಲೂ ಅಂಗವಾಗಿದೆ ಮತ್ತು ಯಾವತ್ತೂ ಕೂಡ ಅವಿಭಾಜ್ಯ ಅಂಗವಾಗಿರಲಿದೆ. ಈ ವಾಸ್ತವವನ್ನು ಬದಲಿಸಲು ಸಾಧ್ಯವಿಲ್ಲ' ಎಂದು ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿದ್ದಾರೆ.

'ಇಸ್ಲಾಮೋಫೋಬಿಯಾ' ವಿರುದ್ಧದ ಅನೌಪಚಾರಿಕ ಚರ್ಚೆಯಲ್ಲಿ ಪಾಕಿಸ್ತಾನದ ಮಾಜಿ ವಿದೇಶಾಂಗ ಕಾರ್ಯದರ್ಶಿ ತಹಮೀನ ಜಂಜುವಾ, ಕಾಶ್ಮೀರದ ಕುರಿತು ಉಲ್ಲೇಖ ಮಾಡಿದ್ದರು.
.ಪಾಕಿಸ್ತಾನ ಭಯೋತ್ಪಾದನೆಯ ಕೇಂದ್ರ: ರೈಲು ಮೇಲಿನ ದಾಳಿ ಕೈವಾಡ ನಿರಾಕರಿಸಿದ ಭಾರತ.ಪಾಕಿಸ್ತಾನ ರೈಲನ್ನು 'ಬಲೂಚಿ' ಬಂಡುಕೋರರು ಹೈಜಾಕ್ ಮಾಡಿದ್ದು ಹೇಗೆ? ವಿಡಿಯೊ ನೋಡಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.