ಕೊಲಂಬೊ: ಭಾರತೀಯ ವಸತಿ ಯೋಜನೆಯಡಿ ನಿರ್ಮಾಣಗೊಂಡ ಮನೆಗಳನ್ನು ಪಡೆದ ತಮಿಳು ಮೂಲದ ಫಲಾನುಭವಿಗಳನ್ನು ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರು ಸೋಮವಾರ ಭೇಟಿಯಾದರು.

ರಾಧಾಕೃಷ್ಣನ್ ಅವರು ಎರಡು ದಿನ ಶ್ರೀಲಂಕಾಕ್ಕೆ ಭೇಟಿ ನೀಡಿದ್ದು, ಅಲ್ಲಿನ ನುವಾರಾ ಎಲಿಯಾ ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.

‘ಶ್ರೀಲಂಕಾದ ತಮಿಳು ಜನರಿಗಾಗಿ ಭಾರತ ಸರ್ಕಾರವು ಈವರೆಗೆ 50,000 ಮನೆಗಳನ್ನು ನಿರ್ಮಿಸಿದೆ. ಯೋಜನೆಯ ನಾಲ್ಕನೇ ಹಂತದಲ್ಲಿ 10,000 ಮನೆಗಳನ್ನು ಹಸ್ತಾಂತರಿಸಲಾಗು ವುದು’ ಎಂದು ರಾಧಾಕೃಷ್ಣನ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ.

ಹಲವು ಒಪ್ಪಂದಗಳಿಗೆ ಸಹಿ: ರಾಧಾಕೃಷ್ಣನ್ ಅವರು ದ್ವೀಪ ರಾಷ್ಟ್ರ ಶ್ರೀಲಂಕಾದ ಅಧ್ಯಕ್ಷ ಅನುರಾ ಕುಮಾರ ಡಿಸ್ಸಾನಾಯಕೆ ಅವರೊಂದಿಗೆ ಸಮಾಲೋಚನೆ ನಡೆಸಿ, ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸುವ ನಿಟ್ಟಿನಲ್ಲಿ ಹಲವು ಒಪ್ಪಂದಗಳಿಗೆ ಸಹಿ ಮಾಡಿದರು.

ಶ್ರೀಲಂಕಾದಲ್ಲಿ ಅನುಷ್ಠಾನಗೊಂಡಿರುವ ಭಾರತದ ಯೋಜನೆಗಳ ಬಗ್ಗೆ ಉಭಯ ನಾಯಕರು ಚರ್ಚೆ ನಡೆಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-51-1797326205

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.