ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷ ಸ್ಥಾನ: ದಿಟ್ಟ ಹೆಜ್ಜೆಗುರುತು –ಭಾರತ

Last Updated 15 ಜುಲೈ 2021, 6:53 IST
ಅಕ್ಷರ ಗಾತ್ರ

ನ್ಯೂಯಾರ್ಕ್‌: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ ತನ್ನ ಎರಡು ವರ್ಷಗಳ ಅವಧಿಯನ್ನು ಯಶಸ್ವಿಯಾಗಿ ಪೂರೈಸಲಿದ್ದು, 15 ಸದಸ್ಯ ರಾಷ್ಟ್ರಗಳಿರುವ ಈ ಮಂಡಳಿಯಲ್ಲಿ ಕಾಯಂ ಸದಸ್ಯನಾಗುವ ಅರ್ಹತೆಯನ್ನು ಎತ್ತಿ ತೋರಿಸಲಿದೆ’ ಎಂದು ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

’ಮುಂದಿನ ತಿಂಗಳು (ಆಗಸ್ಟ್‌) ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷಸ್ಥಾನಕ್ಕೆ ಆಯ್ಕೆ ನಡೆಯಲಿದ್ದು, ಅದರಲ್ಲಿ ಭಾರತ ಯಶಸ್ವಿಯಾಗಿ ಅಧ್ಯಕ್ಷಸ್ಥಾನವನ್ನು ಅಲಂಕರಿಸಲಿದೆ’ ಎಂದು ವಿಶ್ವಾಸ ಶ್ರಿಂಗ್ಲಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ’ಈ ಹಿನ್ನೆಲೆಯಲ್ಲಿ ನಾವು ಭದ್ರತೆ, ಭಯೋತ್ಪಾದನೆ ನಿಗ್ರಹ ಮತ್ತು ಶಾಂತಿಪಾಲನೆಯಂತಹ ವಿಚಾರಗಳತ್ತ ಹೆಚ್ಚು ಗಮನ ಹರಿಸುತ್ತಿದ್ದೇವೆ’ ಎಂದು ತಿಳಿಸಿದ್ದಾರೆ.

ಶ್ರಿಂಗ್ಲಾ ಬುಧವಾರ ನ್ಯೂಯಾರ್ಕ್‌ಗೆ ಆಗಮಿಸಿದ್ದು, ಪ್ರಸ್ತುತ ಅಧ್ಯಕ್ಷ ಸ್ಥಾನದಲ್ಲಿರುವ ಫ್ರಾನ್ಸ್‌ನ ನೇತೃತ್ವದಲ್ಲಿ ನಡೆಯಲಿರುವ ಭದ್ರತಾ ಮಂಡಳಿಯ ಎರಡು ಉನ್ನತ ಮಟ್ಟದ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಇದೇ ವೇಳೆ, ಶ್ರಿಂಗ್ಲಾ ಅವರುಗುರುವಾರ ವಿಶ್ವ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರೆಸ್ ಅವರನ್ನು ಭೇಟಿ ಮಾಡಿ, ಲಿಬಿಯಾ ಕುರಿತು ಮಾಹಿತಿ ನೀಡಲಿದ್ದಾರೆ. ಭಾರತವುಲಿಬಿಯಾ ಮೇಲಿನ ನಿರ್ಬಂಧ ಸಮಿತಿಯ ಅಧ್ಯಕ್ಷ ಸ್ಥಾನದಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT