ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕ: ಭಾರತೀಯ ಮೂಲದ ವಿದ್ಯಾರ್ಥಿ ಸಾವು

Published 2 ಫೆಬ್ರುವರಿ 2024, 3:01 IST
Last Updated 2 ಫೆಬ್ರುವರಿ 2024, 3:01 IST
ಅಕ್ಷರ ಗಾತ್ರ

ನ್ಯೂಯಾರ್ಕ್: ಭಾರತೀಯ ಮೂಲದ ವಿದ್ಯಾರ್ಥಿ ಮೃತಪಟ್ಟ ಘಟನೆ ಅಮೆರಿಕದ ಓಹಿಯೋ ನಗರದಲ್ಲಿ ನಡೆದಿದೆ. ಪ್ರಕರಣ ಸಂಬಂಧ ಪೊಲೀಸ್ ತನಿಖೆ ನಡೆಯುತ್ತಿದೆ ಎಂದು ನ್ಯೂಯಾರ್ಕ್‌ನ ಭಾರತದ ರಾಯಭಾರ ಕಚೇರಿ ತಿಳಿಸಿದೆ.

‘ಓಹಿಯೋದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ಶ್ರೇಯಸ್‌ ರೆಡ್ಡಿ ಬೆನಿಗೇರಿ ಅವರ ನಿಧನದಿಂದ ಬಹಳ ದುಃಖವಾಗಿದೆ’ ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ರಾಯಭಾರ ಕಚೇರಿ ಪೋಸ್ಟ್‌ ಮಾಡಿದೆ.

ಬೆನಿಗೇರಿ ಅವರು ಸಿನ್ಸಿನಾಟಿಯ ಲಿಂಡ್ನರ್ ಸ್ಕೂಲ್ ಆಫ್ ಬ್ಯುಸಿನೆಸ್‌ನ ವಿದ್ಯಾರ್ಥಿಯಾಗಿದ್ದರು.

‘ಪೊಲೀಸ್‌ ತನಿಖೆ ನಡೆಯುತ್ತಿದೆ. ಘಟನೆ ಕುರಿತು ಯಾವುದೇ ದುಷ್ಕೃತ್ಯ ಕಂಡುಬಂದಿಲ್ಲ’ ಎಂದು ಕಚೇರಿ ಹೇಳಿದೆ.

ಬೆನಿಗೇರಿ ಅವರ ಸಾವಿನ ವಿಷಯದ ಬಗ್ಗೆ ಅವರ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ. ಅವರ ತಂದೆ ಶೀಘ್ರದಲ್ಲೇ ಭಾರತದಿಂದ ಆಗಮಿಸುವ ನಿರೀಕ್ಷೆಯಿದೆ. ರಾಯಭಾರ ಕಚೇರಿಯು ಬೆನಿಗೇರಿ ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದು, ಅವರಿಗೆ ಅಗತ್ಯ ಸಹಾಯವನ್ನು ನೀಡುತ್ತಿದೆ ಎಂದು ಕಚೇರಿ ತಿಳಿಸಿದೆ.

ಜಾರ್ಜಿಯಾದ ಲಿಥೋನಿಯಾ ನಗರದಲ್ಲಿ ಭಾರತೀಯ ವಿದ್ಯಾರ್ಥಿ ವಿವೇಕ್‌ ಸೈನಿ ಮೇಲೆ ಜೂಲಿಯನ್‌ ಫಾಕ್ನರ್‌ ಮಾರಣಾಂತಿಕ ಹಲ್ಲೆ ನಡೆಸಿದ ಕೆಲವೇ ದಿನಗಳಲ್ಲಿ ಈ ಘಟನೆ ನಡೆದಿದೆ.

ಕಳೆದ ತಿಂಗಳು ಅಮೆರಿಕದ ಇಲಿನಾಯ್ಸ್ ಅರ್ಬಾನಾ– ಚಾಂಪೇನ್ ವಿಶ್ವವಿದ್ಯಾಲಯದಲ್ಲಿ (ಯುಐಯುಸಿ) ವ್ಯಾಸಂಗ ಮಾಡುತ್ತಿದ್ದ ಭಾರತ ಮೂಲದ ವಿದ್ಯಾರ್ಥಿ ಅಕುಲ್‌ ಬಿ. ಧವನ್‌ ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT