ವಾಷಿಂಗ್ಟನ್: ಭಾರತೀಯ ಮೂಲದ ಕೆಲವು ಅಮೆರಿಕನ್ನರು, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಚುನಾವಣಾ ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಉದ್ದೇಶದಿಂದ ‘ಟ್ರಂಪ್‌ಗಾಗಿ ಭಾರತೀಯ ಅಮೆರಿಕನ್ನರು’ ಎಂಬ ರಾಜಕೀಯ ಕ್ರಿಯಾ ಸಮಿತಿಯೊಂದನ್ನು ರಚಿಸಿದ್ದಾರೆ.

‘ಭಯೋತ್ಪಾದನೆ ನಿಗ್ರಹ, ವಲಸೆ ನಿಯಂತ್ರಣ ಸೇರಿದಂತೆ ಪ್ರಸ್ತುತ ಆಂತರಿಕ ಹಾಗೂ ಅಂತರರಾಷ್ಟ್ರೀಯ ಪರಿಸ್ಥಿತಿಗಳ ಹಿನ್ನೆಲೆಯಲ್ಲಿ ನೋಡಿದರೆ ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಟ್ರಂಪ್ ಅವರು ಹೆಚ್ಚು ಅರ್ಹ ವ್ಯಕ್ತಿಯಾಗಿದ್ದಾರೆ’ ಎಂದು ಅವರು ಹೇಳಿದ್ದಾರೆ.

‘ಟ್ರಂಪ್ ಅವರು ತಮ್ಮ ಮೊದಲ ಅವಧಿಯಲ್ಲಿ ದೇಶದ ಅರ್ಥವ್ಯವಸ್ಥೆಗೆ ಪುನಶ್ಚೇತನ ನೀಡುವ ಕೆಲಸ ಮಾಡಿದ್ದಾರೆ. ಅಮೆರಿಕವನ್ನು ಜಾಗತಿಕ ವೇದಿಕೆಗೆ ತರುವ, ಭಯೋತ್ಪಾದನೆಯನ್ನು ತಡೆಯುವ, ವಲಸೆಯನ್ನು ನಿಯಂತ್ರಿಸುವ ಮತ್ತು ಶಾಂತಿ ಸ್ಥಾಪಿಸುವ ಕಡೆಗೆ ಗಮನ ಹರಿಸಿರುವುದು ಕಂಡುಬರುತ್ತದೆ’ ಎಂದು ವೇದಿಕೆಯ ಸಂಸ್ಥಾಪಕ ಎ.ಡಿ. ಅಮರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಮರ್ ಅವರು 2016ರಲ್ಲೂ ಇಂಥ ಕ್ರಿಯಾ ಸಮಿತಿಯನ್ನು ರಚಿಸಿ ಟ್ರಂಪ್ ಪರವಾಗಿ ಪ್ರಚಾರ ನಡೆಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.