ಭಾನುವಾರ ಉಕ್ರೇನ್‌ನ ಸೇನಾ ನೆಲೆಯ ಮೇಲೆ ರಷ್ಯಾದ ವಾಯು ಪಡೆ ಆಕ್ರಮಣ ನಡೆಸಿದ್ದು, ಕನಿಷ್ಠ 35 ಮಂದಿ ಸಾವಿಗೀಡಾಗಿದ್ದಾರೆ ಹಾಗೂ 57 ಮಂದಿ ಗಾಯಗೊಂಡಿದ್ದಾರೆ. ಪೋಲೆಂಡ್‌ನ ಗಡಿಗೆ ಸಮೀಪದಲ್ಲಿ ಭಾನುವಾರ ವೈಮಾನಿಕ ದಾಳಿ ನಡೆದಿರುವುದಾಗಿ ಉಕ್ರೇನ್ ಅಧಿಕಾರಿಗಳು ತಿಳಿಸಿದ್ದಾರೆ. ದಾಳಿ ನಡೆದಿರುವ ಸ್ಥಳವು ಪೋಲೆಂಡ್ ಗಡಿ ಭಾಗಕ್ಕೆ 25 ಕಿ.ಮೀ. ದೂರದಲ್ಲಿದೆ. ನ್ಯಾಟೊ ಪಡೆಗಳೊಂದಿಗೆ ಜಂಟಿ ಸಮರಾಭ್ಯಾಸ ಚಟುವಟಿಕೆಗಳನ್ನು ಇಲ್ಲಿನ ಸೇನಾ ತರಬೇತಿ ಕೇಂದ್ರದಲ್ಲಿ ನಡೆಸಲಾಗುತ್ತಿತ್ತು.