ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಾಷಿಂಗ್ಟನ್: ಭಾರತ ರಾಯಭಾರ ಕಚೇರಿ ಅಧಿಕಾರಿ ಸಾವು

Published : 20 ಸೆಪ್ಟೆಂಬರ್ 2024, 23:50 IST
Last Updated : 20 ಸೆಪ್ಟೆಂಬರ್ 2024, 23:50 IST
ಫಾಲೋ ಮಾಡಿ
Comments

ವಾಷಿಂಗ್ಟನ್: ಇಲ್ಲಿನ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಯೊಬ್ಬರು ನಿಗೂಢವಾಗಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಯಭಾರ ಕಚೇರಿಯ ಆವರಣದಲ್ಲಿ ಎರಡು ದಿನಗಳ ಹಿಂದೆ ನಡೆದಿರುವ ಘಟನೆ ಬಗ್ಗೆ ಸ್ಥಳೀಯ ಪೊಲೀಸರು ಮತ್ತು ಸೀಕ್ರೆಟ್‌ ಸರ್ವಿಸ್‌ ಏಜೆನ್ಸಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಆತ್ಮಹತ್ಯೆಯ ಸಾಧ್ಯತೆಯನ್ನೂ ತಳ್ಳಿಹಾಕುವಂತಿಲ್ಲ ಎಂದು ಮೂಲಗಳು ಹೇಳಿವೆ.

‘ರಾಯಭಾರ ಕಚೇರಿಯ ಅಧಿಕಾರಿಯೊಬ್ಬರು ಸೆಪ್ಟೆಂಬರ್‌ 18ರಂದು ಸಂಜೆ ಮೃತಪಟ್ಟಿದ್ದಾರೆ. ಮೃತದೇಹವನ್ನು ಭಾರತಕ್ಕೆ ಕಳುಹಿಸಲು ಕುಟುಂಬದ ಸದಸ್ಯರು ಮತ್ತು ಸಂಬಂಧಪಟ್ಟ ಅಧಿಕಾರಿಗಳ ಜತೆ ಸಂಪರ್ಕದಲ್ಲಿದ್ದೇವೆ’ ಎಂದು ರಾಯಭಾರ ಕಚೇರಿ ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT