ನವದೆಹಲಿ: ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್ನಲ್ಲಿ ಭಾರತ ತನ್ನ ರಾಯಭಾರ ಕಚೇರಿಯನ್ನು ಮತ್ತೆ ಪುನರಾರಂಭಿಸಲಿದೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಘೋಷಿಸಿದ್ದಾರೆ.

ನಾಲ್ಕು ವರ್ಷಗಳ ಹಿಂದೆ ಮುಚ್ಚಲ್ಪಟ್ಟಿದ್ದ ಭಾರತದ ರಾಯಭಾರ ಕಚೇರಿಯನ್ನು ಮತ್ತೆ ತೆರೆಯಲಾಗುತ್ತಿದೆ. ಈ ಮೂಲಕ ಅಫ್ಗಾನಿಸ್ತಾನದೊಂದಿಗೆ ರಾಜತಾಂತ್ರಿಕ ವ್ಯವಹಾರವನ್ನು ವಿಸ್ತರಿಸುವ ಗುರಿ ಹೊಂದಲಾಗಿದೆ.

2021ರಲ್ಲಿ ಅಫ್ಗಾನಿಸ್ತಾನದಿಂದ ಅಮೆರಿಕ ನೇತೃತ್ವದ ನ್ಯಾಟೊ ಪಡೆ ತನ್ನ ಸೇನೆಯನ್ನು ಹಿಂಪಡೆದಿತ್ತು. ಬಳಿಕ ತಾಲಿಬಾನ್ ಸರ್ಕಾರ ಅಧಿಕಾರ ವಹಿಸಿಕೊಂಡ ನಂತರ ರಾಯಭಾರ ಕಚೇರಿಯನ್ನು ಮುಚ್ಚಲಾಗಿತ್ತು. ಅದಾದ ಒಂದು ವರ್ಷದ ಬಳಿಕ ವ್ಯಾಪಾರ, ವೈದ್ಯಕೀಯ ಹಾಗೂ ಮಾನವೀಯ ನೆರವಿಗಾಗಿ ಸಣ್ಣ ನಿಯೋಗವನ್ನು ರಚಿಸಿತ್ತು.

ಭಾರತಕ್ಕೆ ಭೇಟಿ ನೀಡಿರುವ ಅಫ್ಗಾನ್ ತಾಲಿಬಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಾಖಿ ಅವರೊಂದಿಗೆ ಮಾತುಕತೆ ವೇಳೆ ವಿದೇಶಾಂಗ ಸಚಿವ ಜೈಶಂಕರ್ ಈ ಕುರಿತು ಘೋಷಣೆ ಮಾಡಿದ್ದಾರೆ.

ಈ ವೇಳೆ ಅಫ್ಗಾನಿಸ್ತಾನಕ್ಕೆ ಭಾರತದ ಬೆಂಬಲವನ್ನು ಜೈಶಂಕರ್ ಪುನರುಚ್ಚರಿಸಿದ್ದಾರೆ.
.Earthquake | ಅಫ್ಗಾನಿಸ್ತಾನ ಭೂಕಂಪ: ಸಾವಿನ ಸಂಖ್ಯೆ 2205ಕ್ಕೆ ಏರಿಕೆ.ಕಾಬುಲ್: ಅಫ್ಗಾನ್ ವಿದೇಶಾಂಗ ಕಚೇರಿ ಬಳಿ ಆತ್ಮಹತ್ಯಾ ದಾಳಿ– 6 ಮಂದಿ ಸಾವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.