ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹೆಚ್ಚುತ್ತಿರುವ ಸಂಘರ್ಷ: ಲೆಬನಾನ್‌ ತೊರೆಯುವಂತೆ ತನ್ನ ನಾಗರಿಕರಿಗೆ ಭಾರತ ಮನವಿ

Published : 26 ಸೆಪ್ಟೆಂಬರ್ 2024, 10:02 IST
Last Updated : 26 ಸೆಪ್ಟೆಂಬರ್ 2024, 10:02 IST
ಫಾಲೋ ಮಾಡಿ
Comments

ಜೆರುಸಲೇಂ: ಇಸ್ರೇಲ್ ಹಾಗೂ ಹಿಜ್ಬುಲ್ಲಾ ನಡುವಿನ ಸಂಘರ್ಷ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಲೆಬೆನಾನ್‌ಗೆ ಪ್ರಯಾಣಿಸದಂತೆ ಬೈರೂತ್‍ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತನ್ನ ನಾಗರಿಕರಿಗೆ ಗುರುವಾರ ಸೂಚನೆ ನೀಡಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಭಾರತೀಯ ರಾಯಭಾರ ಕಚೇರಿ. 'ಲೆಬನಾನ್‍ನಲ್ಲಿ ನೆಲೆಸಿರುವ ಭಾರತೀಯ ಪ್ರಜೆಗಳಿಗೆ ಆದಷ್ಟು ಬೇಗ ದೇಶವನ್ನು ತೊರೆಯುವಂತೆ ಸಲಹೆ ನೀಡಿದೆ. ಅಲ್ಲದೇ ಕಾರಣಾಂತರಗಳಿಂದ ಲೆಬನಾನ್‍ನಲ್ಲೇ ಉಳಿದ ಜನ ಎಚ್ಚರಿಕೆಯಿಂದ ಇರುವಂತೆ ಹಾಗೂ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರುವಂತೆ‘ ಹೇಳಿದೆ.

ಬೈರೂತ್‌ನಲ್ಲಿರುವ ಭಾರತದ ರಾಯಭಾರ ಕಚೇರಿಯೊಂದಿಗೆ ಸಂಪರ್ಕಕ್ಕಾಗಿ ಇಮೇಲ್ ಐಡಿ cons.beirut@mea.gov.in ಅಥವಾ ತುರ್ತು ದೂರವಾಣಿ ಸಂಖ್ಯೆ +96176860128ಕ್ಕೆ ಕರೆ ಮಾಡುವಂತೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT