ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಲಂಕಾದ ಪೂರ್ವ ಪ್ರಾಂತ್ಯಕ್ಕೆ ಭಾರತೀಯ ರಾಯಭಾರಿ ಭೇಟಿ, ಪರಿಶೀಲನೆ

Published 6 ಮೇ 2024, 14:33 IST
Last Updated 6 ಮೇ 2024, 14:33 IST
ಅಕ್ಷರ ಗಾತ್ರ

ಕೊಲಂಬೊ: ಶ್ರೀಲಂಕಾದ ಪೂರ್ವ ಪ್ರಾಂತ್ಯದ ಜೊತೆಗೆ ಭಾರತವು ವಿಶೇಷ ಬಾಂಧವ್ಯ ಹೊಂದಿದ್ದು, ಉಭಯ ರಾಷ್ಟ್ರಗಳ ಸಂಪರ್ಕದಲ್ಲಿ ಇದರ ಪಾತ್ರ ಮಹತ್ವದ್ದಾಗಿದೆ ಎಂದು ಭಾರತೀಯ ರಾಯಭಾರಿ ಸಂತೋಷ್ ಝಾ ಹೇಳಿದರು.

ಈ ಪ್ರಾಂತ್ಯದ ಮೂರು ಜಿಲ್ಲೆಗಳಿಗೆ ಭೇಟಿ ನೀಡಿದ್ದ ಅವರು, ಭಾರತ ಸರ್ಕಾರದ ನೆರವಿನಲ್ಲಿ ಕೈಗೊಳ್ಳಲಾಗಿರುವ ವಿವಿಧ ಅಭಿವೃದ್ಧಿ ಕಾರ್ಯಗಳು, ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿ ಮಾತನಾಡಿದರು.

ಈ ಪ್ರಾಂತ್ಯದ ಮೂರು ಜಿಲ್ಲೆಗಳ ವಿವಿಧ ಕ್ಷೇತ್ರಗಳಲ್ಲಿ 33 ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಅಲ್ಲದೆ, ತ್ರಿಂಕೋಮಾಲಿ ಸಮಗ್ರ ಅಭಿವೃದ್ಧಿಗಾಗಿ ಉಭಯ ಸರ್ಕಾರಗಳ ನಡುವೆ ಮಾತುಕತೆ ನಡೆದಿದೆ ಎಂದು ಹೇಳಿದರು.

‘ಭಾರತ ಸರ್ಕಾರವು ಜಾರಿಗೊಳಿಸುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಝಾ ಪರಿಶೀಲಿಸಿದರು. ಈ ಪ್ರಾಂತ್ಯದಲ್ಲಿರುವ ಹಲವು ಐತಿಹಾಸಿಕ, ಸಾಂಸ್ಕೃತಿಕ, ವಾಣಿಜ್ಯ ಮಹತ್ವದ ಸ್ಥಳಗಳಿಗೂ ಭೇಟಿ ನೀಡಿದ್ದರು’ ಎಂದು ಈ ಬಗ್ಗೆ ನೀಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT