ಕೊಲಂಬೊ: ಉತ್ತರ ಶ್ರೀಲಂಕಾದ ಜಲ ಗಡಿ ಪ್ರದೇಶದಲ್ಲಿ ಮೀನುಗಾರಿಕೆ ಮಾಡಿದ ಆರೋಪದ ಮೇಲೆ 47 ಭಾರತೀಯ ಮೀನುಗಾರರನ್ನು ಬಂಧಿಸಲಾಗಿದೆ ಎಂದು ಅಲ್ಲಿನ ನೌಕಾಪಡೆ ತಿಳಿಸಿದೆ.

ಉತ್ತರ ಶ್ರೀಲಂಕಾದ ತಲೈಮನ್ನಾರ್ನಲ್ಲಿ ನಡೆದ ಪ್ರಕರಣ ಸಂಬಂಧ ಐದು ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮನ್ನಾರ್ ಮತ್ತು ಡೆಲ್ಫ್ಟ್ ಸಾಗರ ಪ್ರದೇಶದಲ್ಲಿ ನಡೆಸಿದ ಕಾರ್ಯಾಚರಣೆಯ ಸಂದರ್ಭದಲ್ಲಿ ಭಾರತೀಯ ಮೀನುಗಾರರನ್ನು ಬಂಧಿಸಲಾಗಿದೆ.

ಬಂಧಿತರನ್ನು ಮುಂದಿನ ಕ್ರಮಕ್ಕಾಗಿ ಮನ್ನಾರ್ ಮೀನುಗಾರಿಕಾ ನಿರೀಕ್ಷಕರಿಗೆ ಹಸ್ತಾಂತರಿಸಲಾಗುವುದು ಎಂದು ಹೇಳಿದೆ.

ಕಳೆದ ತಿಂಗಳು, ಉತ್ತರ ಶ್ರೀಲಂಕಾದ ಜಾಫ್ನಾ ಬಳಿ 12 ಭಾರತೀಯ ಮೀನುಗಾರರು ಹಾಗೂ ದೋಣಿಗಳನ್ನು ವಶಪಡಿಸಿಕೊಳ್ಳಲಾಗಿತ್ತು.
.ಮ್ಯಾನ್ಮಾರ್: ಪ್ಯಾರಾಗ್ಲೈಡ್ನಲ್ಲಿ ಬಂದು ಬಾಂಬ್ ಹಾಕಿದ ಯೋಧ! 40 ಜನ ಸಾವು.ಉಕ್ರೇನ್ನ ಉಷ್ಣ ವಿದ್ಯುತ್ ಸ್ಥಾವರದ ಮೇಲೆ ರಷ್ಯಾ ದಾಳಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.