ವಾಷಿಂಗ್ಟನ್: ಭಾರತ ಮತ್ತು ಅಮೆರಿಕದ 2+2 ಸಚಿವರ (ಉಭಯ ರಾಷ್ಟ್ರಗಳ ರಕ್ಷಣಾ ಮತ್ತು ವಿದೇಶಾಂಗ ಸಚಿವರ) ಸಭೆಯು ಸೋಮವಾರ ನಡೆಯಲಿದ್ದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ವಾಷಿಂಗ್ಟನ್ ತಲುಪಿದ್ದಾರೆ.

ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರ ಆಡಳಿತಾವಧಿಯಲ್ಲಿ ನಡೆಯುತ್ತಿರುವ ಮೊದಲ 2+2 ಸಚಿವರ ಸಭೆ ಇದಾಗಿದೆ. ಉಕ್ರೇನ್‌ನಲ್ಲಿ ರಷ್ಯಾ ಆಕ್ರಮಣ ಮುಂದುವರಿದಿರುವ ಹಿನ್ನೆಲೆಯಲ್ಲಿ ಈ ಸಭೆಯ ಮಹತ್ವ ಹೆಚ್ಚಿದೆ. ಉಭಯ ರಾಷ್ಟ್ರಗಳ ಬಾಂಧವ್ಯದ ಸಂಕೇತವಾಗಿರುವ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಬೈಡನ್ ಅವರು ವರ್ಚುವಲ್ ಆಗಿ ಭಾಗಿಯಾಗುತ್ತಿದ್ದಾರೆ.

ರಾಜನಾಥ್ ಸಿಂಗ್ ಮತ್ತು ಜೈಶಂಕರ್ ಅವರೊಂದಿಗೆ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಮತ್ತು ವಿದೇಶಾಂಗ ಕಾರ್ಯದರ್ಶಿ ಆಂಟೊನಿ ಬ್ಲಿಂಕೆನ್ ಶ್ವೇತ ಭವನದಲ್ಲಿ ಭೇಟಿಯಾಗಲಿದ್ದಾರೆ.

ಇದನ್ನೂ ಓದಿ–ಅಮೆರಿಕ: ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಏರಿಕೆ

ಕೋವಿಡ್–19 ಸಾಂಕ್ರಾಮಿಕ ತಡೆ, ಹವಾಮಾನ ವೈಪರೀತ್ಯ ಬಿಕ್ಕಟ್ಟು, ಜಾಗತಿಕ ಆರ್ಥಿಕತೆಗೆ ಬಲ ನೀಡುವುದು, ಭದ್ರತೆ, ಪ್ರಜಾಪ್ರಭುತ್ವ, ಇಂಡೊ–ಪೆಸಿಫಿಕ್ ವಲಯದಲ್ಲಿ ಏಳಿಗೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಬೈಡನ್ ಮತ್ತು ಮೋದಿ ಚರ್ಚಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.