ಸೋಮವಾರ, 15 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಇಟಲಿ | ಭಾರತ ಮೂಲದ ವ್ಯಕ್ತಿ ಸಾವು

Published 20 ಜೂನ್ 2024, 3:26 IST
Last Updated 20 ಜೂನ್ 2024, 3:26 IST
ಅಕ್ಷರ ಗಾತ್ರ

ಲಾಟಿನಾ: ಭಾರತ ಮೂಲದ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಇಟಲಿಯಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

ಇಟಲಿಯಲ್ಲಿ ಕೆಲಸ ಮಾಡುತ್ತಿದ್ದ ಭಾರತೀಯ ಮೂಲದ ಕೃಷಿ ಕಾರ್ಮಿಕ ಸತ್ನಮ್ ಸಿಂಗ್ ಎಂಬವರು ಮೃತಪಟ್ಟಿದ್ದಾರೆ.

ಮೃತರ ಕುಟುಂಬಕ್ಕೆ ಬೇಕಾದ ಎಲ್ಲ ಸಹಾಯ ಮಾಡಲು ಸ್ಥಳೀಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಭಾರತದ ರಾಯಭಾರ ಕಚೇರಿ ತಿಳಿಸಿದೆ.

ಭಾರತದ ಸಾವಿರಾರು ವಲಸೆ ಕಾರ್ಮಿಕರು ಕೆಲಸ ಮಾಡುತ್ತಿರುವ ದಕ್ಷಿಣ ರೋಮ್‌ನ ಗ್ರಾಮೀಣ ಪ್ರದೇಶ ಲಾಟಿನಾದ ಜಮೀನಿನಲ್ಲಿ ಸತ್ನಮ್ ಸಿಂಗ್ ಕೆಲಸ ಮಾಡುತ್ತಿದ್ದರು.

ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಂಭವಿಸಿದ್ದ ಅಪಘಾತದಲ್ಲಿ ಸತ್ನಮ್ ಸಿಂಗ್ ಗಂಭೀರವಾಗಿ ಗಾಯಗೊಂಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT