ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಡಲ್ಗಳ್ಳತನ: ಭಾರತೀಯ ನೌಕಾಪಡೆಯಿಂದ ಪಾಕ್‌ನ 19 ಸೇರಿ 36 ಸಿಬ್ಬಂದಿ ರಕ್ಷಣೆ

Published 30 ಜನವರಿ 2024, 5:38 IST
Last Updated 30 ಜನವರಿ 2024, 5:38 IST
ಅಕ್ಷರ ಗಾತ್ರ

ನವದೆಹಲಿ: ಸೊಮಾಲಿಯಾದ ಪೂರ್ವ ಕರಾವಳಿಯಲ್ಲಿ ಕಡಲ್ಗಳ್ಳರು ಅಪಹರಿಸಿದ್ದ ಎರಡು ಮೀನುಗಾರಿಕಾ ಹಡಗಿನಲ್ಲಿದ್ದ ಒಟ್ಟು 36 ಮಂದಿಯನ್ನು ಭಾರತೀಯ ನೌಕಾಪಡೆ ರಕ್ಷಣೆ ಮಾಡಿದೆ.

ಎರಡು ಕಾರ್ಯಾಚರಣೆಗಳಲ್ಲಿ ಪಾಕಿಸ್ತಾನದ 19 ಮತ್ತು ಇರಾನ್‌ನ 17 ಸಿಬ್ಬಂದಿಯನ್ನು ರಕ್ಷಿಸಲಾಗಿದೆ.

ಪೂರ್ವ ಕರಾವಳಿ ಹಾಗೂ ಗಲ್ಫ್ ಆಫ್ ಏಡನ್‌ನಲ್ಲಿ ಐಎನ್‌ಎಸ್ ಸುಮಿತ್ರಾ ನೌಕೆಯನ್ನು ಕಾರ್ಯಾಚರಣೆಗೆ ನಿಯೋಜಿಸಲಾಗಿತ್ತು.

ಮೀನುಗಾರಿಕಾ ಹಡಗು ಕಡಲ್ಗಳ್ಳರ ದಾಳಿಗೆ ಒಳಗಾಗಿತ್ತು. ಅದರ ಸಿಬ್ಬಂದಿಯನ್ನು ಒತ್ತೆಸೆರೆಯಲ್ಲಿಟ್ಟಿದ್ದರು. ಇದನ್ನು ಮಟ್ಟ ಹಾಕಲು ಭಾರತೀಯ ನೌಕಾಪಡೆಯು ಕಡಲ್ಗಳ್ಳತನ ವಿರೋಧಿ ಕಾರ್ಯಾಚರಣೆಯನ್ನು ನಡೆಸಿತ್ತು.

ಇರಾನ್ ಧ್ವಜ ಹೊಂದಿದ್ದ ಮೀನುಗಾರಿಕಾ ಹಡಗಿನಲ್ಲಿದ್ದ 19 ಪಾಕಿಸ್ತಾನಿ ಪ್ರಜೆಗಳನ್ನು ಭಾರತೀಯ ನೌಕಾಪಡೆ ರಕ್ಷಿಸಿತು. 36 ತಾಸಿನ ಅವಧಿಯಲ್ಲಿ ಮತ್ತೊಂದು ಕಾರ್ಯಾಚರಣೆ ನಡೆಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT