ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆನಡಾದಲ್ಲಿ ಗುಂಡಿನ ದಾಳಿ: ಭಾರತ ಮೂಲದ ಉದ್ಯಮಿ ಸಾವು

Published 9 ಏಪ್ರಿಲ್ 2024, 10:44 IST
Last Updated 9 ಏಪ್ರಿಲ್ 2024, 10:44 IST
ಅಕ್ಷರ ಗಾತ್ರ

ಒಟ್ಟಾವ: ಕೆನಡಾದ ಅಲ್ಬೆರ್ಟಾ ಪ್ರಾಂತ್ಯದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಭಾರತ ಮೂಲದ ನಿರ್ಮಾಣ ಉದ್ಯಮಿ ಸೇರಿ ಇಬ್ಬರು ಮೃತಪಟ್ಟಿದ್ದು, ಮತ್ತೊರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಅಲ್ಬೆರ್ಟಾ ಪ್ರಾಂತ್ಯದ ಸಮೀಪದ ಕ್ಯವನಾಹ್‌ನ ವಸತಿ ‍ಪ್ರದೇಶದಲ್ಲಿ ಸೋಮವಾರ ಈ ಘಟನೆ ನಡೆದಿದ್ದು, ಪೊಲೀಸರು ಇದಕ್ಕೆ ಪ್ರತ್ಯುತ್ತರ ನೀಡಿದ್ದಾರೆ ಎಂದು ಸಿಬಿಸಿ ಸುದ್ದಿ ವಾಹಿನಿ ವರದಿ ಮಾಡಿದೆ.

49 ಹಾಗೂ 57 ವರ್ಷದ ಇಬ್ಬರು ಮೃತಪಟ್ಟಿದ್ದು, 51 ವರ್ಷದ ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರ ಮರಣೋತ್ತರ ಪರೀಕ್ಷೆ ಮಂಗಳವಾರ ಹಾಗೂ ಬುಧವಾರ ನಿಗದಿಯಾಗಿದೆ ಎಂದು ವರದಿ ತಿಳಿಸಿದೆ.

ಮೃತಟಟ್ಟ ವ್ಯಕ್ತಿಯನ್ನು ಬೂಟಾ ಸಿಂಗ್ ಗಿಲ್ ಎಂದು ಗುರುತಿಸಲಾಗಿದ್ದು, ನಿರ್ಮಾಣ ಕಂಪನಿಯೊಂದರ ಮಾಲೀಕರಾಗಿದ್ದಾರೆ. ಪಂಜಾಬಿ ಸಮುದಾಯಕ್ಕೆ ಸೇರಿದವರು ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT