ಸಿಂಗಪುರ: ಭಾರತ ಮೂಲದ ಅರ್ಥಶಾಸ್ತ್ರಜ್ಞ ಥರ್ಮನ್ ಷಣ್ಮುಗರತ್ನಂ ಅವರು ಸಿಂಗಪುರದ ಒಂಬತ್ತನೇ ಅಧ್ಯಕ್ಷರಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಇಲ್ಲಿನ ‘ಇಸ್ತಾನಾ’ದಲ್ಲಿ ಭಾರತ ಮೂಲದ ಮುಖ್ಯ ನ್ಯಾಯಮೂರ್ತಿ ಸುಂದರೇಶ್ ಮೆನನ್ ಅವರು ಥರ್ಮನ್ ಅವರಿಗೆ ಪ್ರಮಾಣವಚನ ಬೋಧಿಸಿದರು.
ಸಮಾರಂಭದಲ್ಲಿ ಪ್ರಧಾನಿ ಲೀ ಸಿಯೆನ್ ಲೂಂಗ್, ಸಂಪುಟದ ಸದಸ್ಯರು, ಸಂಸದರು ಹಾಗೂ ಹಿರಿಯ ನಾಗರಿಕ ಅಧಿಕಾರಿಗಳು ಪಾಲ್ಗೊಂಡಿದ್ದರು.
ಥರ್ಮನ್ ಅವರು ಆರು ವರ್ಷ ಅಧಿಕಾರದಲ್ಲಿರಲಿದ್ದಾರೆ. ಸಾರ್ವಜನಿಕ ಸೇವೆಯಲ್ಲಿ ತಮ್ಮ ಜೀವನದುದ್ದಕ್ಕೂ ಸೇವೆ ಸಲ್ಲಿಸಿದ ಥರ್ಮನ್ ಸಿಂಗಪುರದಲ್ಲೇ ಜನಿಸಿದವರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.