ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಂಗಪುರ: ಕೆಲಸದ ಸ್ಥಳದಲ್ಲೇ ಭಾರತ ಮೂಲದ ವ್ಯಕ್ತಿ ಸಾವು

Published 13 ಜುಲೈ 2023, 4:15 IST
Last Updated 13 ಜುಲೈ 2023, 4:15 IST
ಅಕ್ಷರ ಗಾತ್ರ

ಸಿಂಗಪುರ : ಇಲ್ಲಿನ ಜುರಾಂಗ್ ಪಶ್ಚಿಮ ಕೈಗಾರಿಕಾ ಪ್ರದೇಶದಲ್ಲಿ ಕೆಲಸದಲ್ಲಿ ತೊಡಗಿದ್ದ ವೇಳೆ 33 ವರ್ಷದ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಮೃತ ವ್ಯಕ್ತಿಯು ಬಿಎಸ್‌ಎನ್ ಟೆಕ್ ಇಂಜಿನಿಯರಿಂಗ್‌ ಕಂಪನಿಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. 

ಮಾನವ ಸಂಪನ್ಮೂಲ ಸಚಿವಾಲಯದ ಪ್ರಕಾರ, ವಸ್ತುಗಳನ್ನು ಇಳಿಸಲು ಅವರು ಟಿಪ್ಪರ್ ಟ್ರಕ್ ಅನ್ನು ಸಿದ್ಧಪಡಿಸುತ್ತಿದ್ದರು. ಈ ವೇಳೆ ನಿರ್ಮಾಣ ಸ್ಥಳಗಳಲ್ಲಿ ವಸ್ತುಗಳನ್ನು ಎತ್ತಲು ಬಳಸುವ ರಿವರ್ಸಿಂಗ್ ವೀಲ್ ಲೋಡರ್‌ ಹಿಮ್ಮುಖವಾಗಿ ಬಂದು ಡಿಕ್ಕಿ ಹೊಡೆದಿದೆ.

ಘಟನೆಯಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಸಿಂಗಪುರ ಸಿವಿಲ್ ಡಿಫೆನ್ಸ್ ಫೋರ್ಸ್ ಮಾಹಿತಿ ನೀಡಿದೆ.

ಸ್ಥಳೀಯ ಕಾಲಮಾನ ಮಧ್ಯಾಹ್ನ 3.40 ಸುಮಾರಿಗೆ ಘಟನೆ ನಡೆದಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT