ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೆನಡಾ | ಗುಂಡಿಕ್ಕಿ ಭಾರತೀಯ ಮೂಲದ ವ್ಯಕ್ತಿಯ ಹತ್ಯೆ; ನಾಲ್ವರ ಬಂಧನ

Published 10 ಜೂನ್ 2024, 14:47 IST
Last Updated 10 ಜೂನ್ 2024, 14:47 IST
ಅಕ್ಷರ ಗಾತ್ರ

ಒಟ್ಟಾವ: ಕೆನಡಾದ ಬ್ರಿಟಿಷ್‌ ಕೊಲಂಬಿಯ ಪ್ರಾಂತ್ಯದಲ್ಲಿ 28 ವರ್ಷದ ಭಾರತೀಯ ಮೂಲದ ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಇದು ‘ಉದ್ದೇಶಪೂರ್ವಕ ಕೊಲೆ’ ಎಂದು ಶಂಕಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ಮುಂಜಾನೆ ಸರ್‍ರೆ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಯುವರಾಜ್‌ ಗೋಯಲ್‌ ಎಂದು ಗುರುತಿಸಲಾಗಿದೆ. ಯುವರಾಜ್‌ ಅವರು ಕಾರ್‌ ಡೀಲರ್‌ಶಿಪ್‌ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಇವರ ಹತ್ಯೆಗೆ ನಿಖರವಾದ ಕಾರಣ ಗೊತ್ತಾಗಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆಯಾಗುವ ಮುನ್ನ ಯುವರಾಜ್‌, ಭಾರತದಲ್ಲಿರುವ ತನ್ನ ತಾಯಿಯೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದ. ಎಂದಿನಂತೆ ಜಿಮ್‌ ಮುಗಿಸಿ ಮನೆಗೆ ಮರಳುವಾಗ ಕಾರಿನಿಂದ ಇಳಿದ ಕೂಡಲೇ ಹತ್ಯೆ ಮಾಡಲಾಗಿದೆ ಎಂದು ಅವರ ಸಹೋದರ ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT