ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕದಲ್ಲಿ ಇಸ್ರೇಲ್ ವಿರೋಧಿ ಪ್ರತಿಭಟನೆ: ಭಾರತ ಮೂಲದ ವಿದ್ಯಾರ್ಥಿನಿ ಸೆರೆ

Published 26 ಏಪ್ರಿಲ್ 2024, 16:12 IST
Last Updated 26 ಏಪ್ರಿಲ್ 2024, 16:12 IST
ಅಕ್ಷರ ಗಾತ್ರ

ನ್ಯೂಯಾರ್ಕ್: ಅಮೆರಿಕದ ಪ್ರತಿಷ್ಠಿತ ‘ಪ್ರಿನ್ಸ್‌ಟನ್ ವಿಶ್ವವಿದ್ಯಾಲಯ’ದ ಆವರಣದಲ್ಲಿ ಪ್ಯಾಲೆಸ್ಟೀನ್ ಪರ ಪ್ರತಿಭಟನೆಯಲ್ಲಿ ಭಾಗಿಯಾದ ಕಾರಣಕ್ಕೆ ಭಾರತ ಮೂಲದ ವಿದ್ಯಾರ್ಥಿನಿ ಸೇರಿದಂತೆ ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಈ ಇಬ್ಬರು ವಿದ್ಯಾರ್ಥಿಗಳು ಕಾಲೇಜಿನ ಆವರಣ ಪ್ರವೇಶಿಸದಂತೆ ನಿರ್ಬಂಧ ಹೇರಲಾಗಿದೆ ಎಂದು ತಿಳಿದುಬಂದಿದೆ. 

ಗಾಜಾದಲ್ಲಿ ಯುದ್ಧದಲ್ಲಿ ತೊಡಗಿರುವ ಇಸ್ರೇಲ್ ಮತ್ತು ಆ ದೇಶದ ಕಂಪನಿಗಳ ಜೊತೆಗಿನ ಹಣಕಾಸು  ಒಪ್ಪಂದಗಳನ್ನು ಕಾಲೇಜುಗಳು ಮಾಡಿಕೊಳ್ಳಬಾರದು  ಎಂದು ಒತ್ತಾಯಿಸಿ ಗುರುವಾರ ಬೆಳಿಗ್ಗೆ ಸುಮಾರು 100 ವಿದ್ಯಾರ್ಥಿಗಳು ಪ್ರತಿಭಟನೆ ಕೈಗೊಂಡಿದ್ದರು. ಈ ಪ್ರತಿಭಟನೆಗಳು ಯಹೂದಿ ವಿರೋಧಿಯಾಗಿದ್ದು, ವಿವಿ ಕ್ಯಾಂಪಸ್ ಪ್ರವೇಶಿಸಲು ಭಯಪಡುವಂತಾಗಿದೆ ಎಂದು ಕೆಲವು ಯಹೂದಿ ವಿದ್ಯಾರ್ಥಿಗಳು ಆರೋಪಿಸಿದ್ದರು. ಹೀಗಾಗಿ, ಈ ಕ್ರಮ ಕೈಗೊಳ್ಳಲಾಗಿದೆ ಎಂದು ವಿವಿ ತಿಳಿಸಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT