ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನ್ಯೂಯಾರ್ಕ್‌ನಲ್ಲಿ ಭಾರತೀಯನಿಂದ ಗುಂಡಿನ ದಾಳಿ: ಭಾರತ ಮೂಲದ ಯುವತಿ ಸಾವು

ಯುವಕನೊಬ್ಬ ನಡೆಸಿದ ಗುಂಡಿನ ದಾಳಿಯಿಂದ ಭಾರತ ಮೂಲದ ಯುವತಿಯೊಬ್ಬರು ಮೃತಪಟ್ಟು ಆಕೆಯ ಸಹೋದರಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನ್ಯೂಯಾರ್ಕ್‌ನಲ್ಲಿ ನಡೆದಿದೆ.
Published 17 ಜೂನ್ 2024, 14:24 IST
Last Updated 17 ಜೂನ್ 2024, 14:24 IST
ಅಕ್ಷರ ಗಾತ್ರ

ನ್ಯೂಯಾರ್ಕ್: ಯುವಕನೊಬ್ಬ ನಡೆಸಿದ ಗುಂಡಿನ ದಾಳಿಯಿಂದ ಭಾರತ ಮೂಲದ ಯುವತಿಯೊಬ್ಬರು ಮೃತಪಟ್ಟು ಆಕೆಯ ಸಹೋದರಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನ್ಯೂಯಾರ್ಕ್‌ನಲ್ಲಿ ನಡೆದಿದೆ.

ಜೂನ್ 12ರಂದು ನ್ಯೂಯಾರ್ಕ್ ಈಶಾನ್ಯ ಭಾಗವಾದ ಮಿಡಲ್‌ಸೆಕ್ಸ್ ಕೌಂಟಿ ಪ್ರದೇಶದಲ್ಲಿ ಗುಂಡಿನ ದಾಳಿ ನಡೆದಿತ್ತು.

ಗಂಭೀರವಾಗಿ ಗಾಯಗೊಂಡಿದ್ದ ಜಸ್ವೀರ್ ಕೌರ್ (29) ಅವರು ಆಸ್ಪತ್ರೆಯಲ್ಲಿ ಶನಿವಾರ ಮೃತಪಟ್ಟಿದ್ದಾರೆ. ಆಕೆಯ ಸಹೋದರಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ ಎಂದು ಕೌಂಟಿ ಪ್ರಾಸಿಕ್ಯೂಟರ್ ತಿಳಿಸಿದ್ದಾರೆ.

ಗುಂಡಿನ ದಾಳಿ ನಡೆಸಿದವನನ್ನು ಭಾರತ ಮೂಲದ 19 ವರ್ಷದ ಗೌರವ್ ಗಿಲ್ ಎಂದು ಗುರುತಿಸಲಾಗಿದ್ದು ಆತನನ್ನು ಬಂಧಿಸಲಾಗಿದೆ. ಕೌರ್ ಹಾಗೂ ಗಿಲ್ ಒಂದೇ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದರು. ಹತ್ಯೆಯ ಉದ್ದೇಶ ಏನಿತ್ತು ಎಂಬುದು ಇನ್ನೂ ತಿಳಿದು ಬಂದಿಲ್ಲ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT