ಹೈದರಾಬಾದ್/ಲಂಡನ್: ಹೈದರಾಬಾದ್ ಮೂಲದ ಕೊಂತಂ ತೇಜಸ್ವಿನಿ (27) ಎಂಬುವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.

ತೇಜಸ್ವಿನಿ ವಾಸವಿದ್ದ ನೀಲ್ಡ್ ಕ್ರೆಸೆಂಟ್‌ನಲ್ಲಿರುವ ಅಪಾರ್ಟ್‌ಮೆಂಟ್ ಸಮುಚ್ಚಯದ ಫ್ಲ್ಯಾಟ್‌ನಲ್ಲಿ ಮಂಗಳವಾರ ಈ ಕೃತ್ಯ ನಡೆದಿದೆ. ಘಟನೆಯಲ್ಲಿ ಮತ್ತೊಬ್ಬ ಯುವತಿ ಸಹ ಇರಿತಕ್ಕೆ ಒಳಗಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

‘ 23 ವರ್ಷದ ವ್ಯಕ್ತಿ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ’ ಎಂದು ಮೆಟ್ರೋಪಾಲಿಟನ್ ಪೊಲೀಸರು ತಿಳಿಸಿದ್ದಾರೆ.

‘ಘಟನೆ ಬಗ್ಗೆ ಬೆಳಿಗ್ಗೆ ಗೊತ್ತಾಯಿತು. ಯಾವಾಗ ನಡೆದಿದೆ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಮೂರು ವರ್ಷಗಳ ಹಿಂದೆ ಲಂಡನ್‌ಗೆ ತೆರಳಿದ್ದ ಆಕೆ ಎಂ.ಎಸ್ ಪೂರ್ಣಗೊಳಿಸಿದ್ದರು. ಕಳೆದ ವರ್ಷ ಆಗಸ್ಟ್‌ನಲ್ಲಿ ಹೈದರಾಬಾದ್ ಗೆ ಬಂದಿದ್ದಳು. ಒಂದು ತಿಂಗಳ ಬಳಿಕ ಲಂಡನ್‌ಗೆ ತೆರಳಿದ್ದಳು. ಈ ವರ್ಷದ ಮೇ ತಿಂಗಳಲ್ಲಿ ವಾಪಸ್ ಬರಬೇಕಿತ್ತು’ ಎಂದು ತೇಜಸ್ವಿನಿ ಅವರ ತಂದೆ ಹೇಳಿದರು.

‘ಲಂಡನ್‌ನಿಂದ ಮರಳಿದ ಬಳಿಕ ಈ ವರ್ಷ ವಿವಾಹ ಆಗುತ್ತೇನೆ ಎಂದಿದ್ದಳು. ತನ್ನ ಕೆಲಸಕ್ಕೂ ರಾಜೀನಾಮೆ ನೀಡಿದ್ದ ಆಕೆ, ಇನ್ನೊಂದು ತಿಂಗಳು ಕೆಲಸ ಮಾಡಿ ಬರುವುದಾಗಿ ಹೇಳಿದ್ದಳು’ ಎಂದು ತಿಳಿಸಿದರು.

ಪಾರ್ಥಿವ ಶರೀರವನ್ನು ಲಂಡನ್‌ನಿಂದ ಹೈದರಾಬಾದ್‌ಗೆ ತರಲು ಅಗತ್ಯ ವ್ಯವಸ್ಥೆ ಮಾಡುವಂತೆ ಮೃತಳ ಚಿಕ್ಕಪ್ಪ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ದಾಳಿ ಹಿಂದಿನ ಶಂಕಿತ ವ್ಯಕ್ತಿ ಪತ್ತೆ ಹಚ್ಚಲು ಸಾರ್ವಜನಿಕರ ಸಹಾಯವ ಕೋರಲು ಮೆಟ್ರೋಪಾಲಿಟನ್ ಪೊಲೀಸರು ಬ್ರೆಜಿಲ್ ಪ್ರಜೆ ಕೆವೆನ್ ಚಿತ್ರವನ್ನು ಮಂಗಳವಾರ ಬಿಡುಗಡೆ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.