ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಟುಂಬಸ್ಥರ ಕೊಲೆ: ಅಮೆರಿಕದಲ್ಲಿ ಭಾರತದ ವಿದ್ಯಾರ್ಥಿ ಬಂಧನ

Published 29 ನವೆಂಬರ್ 2023, 11:44 IST
Last Updated 29 ನವೆಂಬರ್ 2023, 11:44 IST
ಅಕ್ಷರ ಗಾತ್ರ

ನ್ಯೂಯಾರ್ಕ್‌: ನ್ಯೂಜೆರ್ಸಿಯಲ್ಲಿನ ಮನೆಯಲ್ಲಿ ಅಜ್ಜ–ಅಜ್ಜಿ ಮತ್ತು ಚಿಕ್ಕಪ್ಪನನ್ನು ಕೊಲೆ ಮಾಡಿದ ಆರೋಪದ ಮೇಲೆ 23 ವರ್ಷದ ಭಾರತೀಯ ವಿದ್ಯಾರ್ಥಿ ಓಂ ಬ್ರಹಂಭಟ್ಟನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಿಲೀಪ್‌ಕುಮಾರ್‌ ಬ್ರಹಂಭಟ್ಟ (72), ಬಿಂದು ಬ್ರಹಂಭಟ್ಟ (72) ಮತ್ತು ಯಶ್‌ಕುಮಾರ್‌ ಬ್ರಹಂಭಟ್ಟ (38) ಅವರನ್ನು ಗುಂಡಿಕ್ಕಿ ಕೊಂದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ದಕ್ಷಿಣ ಪ್ಲೈನ್‌ಫೀಲ್ಡ್‌ ಪೊಲೀಸ್‌ ಇಲಾಖೆಯು ಹೇಳಿಕೆಯಲ್ಲಿ ತಿಳಿಸಿದೆ.

ಸೋಮವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ಅಪಾರ್ಟ್‌ಮೆಂಟ್‌ನಲ್ಲಿ ಗುಂಡೇಟಿನ ಶಬ್ದ ಕೇಳಿಬಂದಿತ್ತು. ಈ ಬಗ್ಗೆ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಮಹಿಳೆ ಸೇರಿ ಮೂವರು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಶಂಕಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ನಂತರ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಗುಜರಾತ್‌ ಮೂಲದ ಓಂ, ಕೆಲ ತಿಂಗಳ ಹಿಂದಷ್ಟೇ ನ್ಯೂಜೆರ್ಸಿಗೆ ತೆರಳಿ ಅಜ್ಜ–ಅಜ್ಜಿಯೊಂದಿಗೆ ವಾಸವಿದ್ದ ಎಂದು ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT