ವಾಷಿಂಗ್ಟನ್: ಅಮೆರಿಕದ ಇಂಡಿಯಾನ ರಾಜ್ಯದ ಜಿಮ್‌ನಲ್ಲಿ ಚೂರಿ ಇರಿತಕ್ಕೊಳಗಾಗಿದ್ದ ಭಾರತೀಯ ವಿದ್ಯಾರ್ಥಿ ಮೃತಪಟ್ಟಿದ್ದಾನೆ ಎಂದು ವಾಲ್ಪಾರೈಸೊ ವಿಶ್ವವಿದ್ಯಾಲಯ ಪ್ರಕಟಣೆ ತಿಳಿಸಿದೆ.
24 ವರ್ಷದ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿ ವರುಣ್ ರಾಜ್ ಪುಚಾ ಮೃತ ವಿದ್ಯಾರ್ಥಿ.
ವಿದ್ಯಾರ್ಥಿ ವರುಣ್ ರಾಜ್ ಸಾವಿಗೆ ವಾಲ್ಪಾರೈಸೊ ವಿಶ್ವವಿದ್ಯಾಲಯ ಸಂತಾಪ ಸೂಚಿಸಿದೆ.
ಅಕ್ಟೋಬರ್ 29ರಂದು ಜಿಮ್‌ನಲ್ಲಿ ಜೋರ್ಡಾನ್ ಆಂಡ್ರೇಡ್ ಎಂಬಾತ, ವರುಣ್ ತಲೆಗೆ ಚೂರಿಯಿಂದ ಇರಿದಿದ್ದನು. ಬಳಿಕ ಆರೋಪಿಯನ್ನು ಬಂಧಿಸಲಾಯಿತು. ಘಟನೆ ಹಿಂದಿನ ಕಾರಣ ಪತ್ತೆಹಚ್ಚಲು ತನಿಖೆ ಪ್ರಗತಿಯಲ್ಲಿದೆ.
ತೀವ್ರ ಗಾಯಗೊಂಡಿದ್ದ ವರುಣ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾನೆ.