ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹರಿಯಾಣದ ವಿದ್ಯಾರ್ಥಿ ಕೆನಡಾದಲ್ಲಿ ಗುಂಡೇಟಿಗೆ ಬಲಿ

Published 14 ಏಪ್ರಿಲ್ 2024, 15:58 IST
Last Updated 14 ಏಪ್ರಿಲ್ 2024, 15:58 IST
ಅಕ್ಷರ ಗಾತ್ರ

ಒಟ್ಟಾವ: ಭಾರತೀಯ ಮೂಲದ ವಿದ್ಯಾರ್ಥಿಯೊಬ್ಬ ಕೆನಡಾದ ವಾನ್ಕೋವೆರ್‌ ನಗರದಲ್ಲಿ ಗುಂಡೇಟಿಗೆ ಬಲಿಯಾಗಿದ್ದಾನೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

‘ಮೃತ ವಿದ್ಯಾರ್ಥಿ ಚಿರಾಗ್‌ ಅಂತಿಲ್‌(24) ಏಪ್ರಿಲ್ 12ರಂದು ತನ್ನ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

‘ಗುಂಡಿನ ಶಬ್ದ ಕೇಳಿದ ಬಗ್ಗೆ ಸ್ಥಳೀಯ ನಿವಾಸಿಗಳು ಮಾಹಿತಿ ನೀಡಿದ್ದರು. ಪ್ರಕರಣದ ತನಿಖೆ ನಡೆಯುತ್ತಿದ್ದು, ಆರೋಪಿಗಳ ಪತ್ತೆಯಾಗಿಲ್ಲ’ ಎಂದು ತಿಳಿಸಿದ್ದಾರೆ.

ಹರಿಯಾಣದ ಚಿರಾಗ್‌ 2022ರಿಂದ ಕೆನಡಾದಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿದ್ದ. ಮೃತದೇಹವನ್ನು ಭಾರತಕ್ಕೆ ತರುವ ಸಲುವಾಗಿ ಚಿರಾಗ್‌ ಕುಟುಂಬಸ್ಥರು ಹಣ ಸಂಗ್ರಹಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT