ಟೆಹರಾನ್: ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತೀವ್ರಗೊಂಡಿರುವುದರಿಂದ ಟೆಹರಾನ್ನಲ್ಲಿರುವ ಎಲ್ಲ ಭಾರತೀಯ ಪ್ರಜೆಗಳು ಮಂಗಳವಾರ ತಕ್ಷಣವೇ ಭಾರತದ ರಾಯಭಾರ ಕಚೇರಿಯನ್ನು ಸಂಪರ್ಕಿಸಿ ತಮ್ಮ ಸ್ಥಳ ಮತ್ತು ಸಂಪರ್ಕ ಸಂಖ್ಯೆಗಳನ್ನು ಒದಗಿಸುವಂತೆ ಕೋರಲಾಗಿದೆ.

ತಮ್ಮ ಸ್ವಂತ ಸಂಪನ್ಮೂಲಗಳನ್ನು ಬಳಸಿಕೊಂಡು ಟೆಹರಾನ್ನಿಂದ ಹೊರಹೋಗಲು ಸಾಧ್ಯವಿರುವ ಎಲ್ಲ ಭಾರತೀಯ ಪ್ರಜೆಗಳು ನಗರದ ಹೊರಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಭಾರತೀಯ ಮಿಷನ್ ಸಲಹೆ ನೀಡಿದೆ.

ಟೆಹರಾನ್ನಲ್ಲಿರುವ ಮತ್ತು ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರದ ಎಲ್ಲ ಭಾರತೀಯ ಪ್ರಜೆಗಳು ತಕ್ಷಣ ಭಾರತದ ರಾಯಭಾರ ಕಚೇರಿಯನ್ನು ಸಂಪರ್ಕಿಸಿ ಮತ್ತು ಅವರ ಸ್ಥಳ ಹಾಗೂ ಸಂಪರ್ಕ ಸಂಖ್ಯೆಗಳನ್ನು ಒದಗಿಸುವಂತೆ ಕೋರಲಾಗಿದೆ. +989010144557; +989128109115; +989128109109 ಮೂಲಕ ಸಂಪರ್ಕಿಸುವಂತೆ ಟೆಹ್ರರಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದೆ.

ಇರಾನ್ ಮತ್ತು ಇಸ್ರೇಲ್ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ಸಚಿವಾಲಯದಲ್ಲಿ 24x7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ನಿಯಂತ್ರಣ ಕೊಠಡಿಯ ಸಂಪರ್ಕದ ವಿವರಗಳು ಈ ಕೆಳಗಿನಂತಿವೆ:

1800118797 (ಟೋಲ್-ಫ್ರೀ), +91-11-23012113, +91-11-23014104, +91-11-23017905 +91-9968291988 (ವಾಟ್ಸ್ಆ್ಯಪ್) ಮತ್ತು situationroom@mea.gov.inಗೆ ಮೇಲ್ ಮಾಡಬಹುದು ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ.

ಇದಲ್ಲದೆ, ಟೆಹರಾನ್ನಲ್ಲಿರುವ ಭಾರತದ ರಾಯಭಾರ ಕಚೇರಿಯು 24x7 ತುರ್ತು ಸಹಾಯವಾಣಿಯನ್ನು ಸ್ಥಾಪಿಸಿದೆ.

ಟೆಹರಾನ್ನ ತುರ್ತು ಸಹಾಯವಾಣಿ ಸಂಖ್ಯೆ: +98 9128109115, +98 9128109109; ವಾಟ್ಸ್ಆ್ಯಪ್ ಸಂಖ್ಯೆ: +98 901044557, +98 9015993320, +91 8086871709, ಬಂದರ್ ಅಬ್ಬಾಸ್: +98 9177699036, ಜಹೇದನ್: +98 9396356649 ಸಂಖ್ಯೆಗೂ ಸಂಪರ್ಕಿಸಬಹುದು ಎಂದು ಅದು ತಿಳಿಸಿದೆ.

ಶುಕ್ರವಾರ ಮುಂಜಾನೆ ಇರಾನ್ನ ಪರಮಾಣು, ಕ್ಷಿಪಣಿ ಮತ್ತು ಮಿಲಿಟರಿ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ದಾಳಿ ಮಾಡಿತ್ತು. ನಂತರ ಇರಾನ್, ಇಸ್ರೇಲ್ ಮೇಲೆ ಪ್ರತೀಕಾರದ ದಾಳಿಗಳನ್ನು ಪ್ರಾರಂಭಿಸಿತ್ತು.
.ಟೆಹರಾನ್ನಲ್ಲಿರುವ ನಿವಾಸಿಗಳು ತಕ್ಷಣವೇ ತೆರವುಗೊಳಿಸಿ: ಡೊನಾಲ್ಡ್ ಟ್ರಂಪ್ ಕರೆ.ಇಸ್ರೇಲ್ಗೆ ಜಿ7 ಒಕ್ಕೂಟದ ಬೆಂಬಲ: ಇರಾನ್ ಅಸ್ಥಿರತೆಯ ಮೂಲ ಎಂದು ಖಂಡನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.